ಬೆಂಗಳೂರು: ಪಬ್‌ವೊಂದರಲ್ಲಿ (Pub) ಕನ್ನಡ ಹಾಡು (Kannada Song) ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಆರ್‌ಆರ್ ನಗರದ (RR Nagar) ಐಡಿಯಲ್ ಹೋಮ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಐಡಿಯಲ್ ಹೋಮ್ ಬಳಿಯ ಪಬ್‌ನಲ್ಲಿ ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಪಬ್‌ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತರು ರಾತ್ರಿ 10:45ರ ಸುಮಾರಿಗೆ ಪಬ್‌ಗೆ ಬಂದಿದ್ದರು. ಈ ವೇಳೆ ಪಬ್‌ನಲ್ಲಿ ಕನ್ನಡ ಹಾಡು ಹಾಕಲಾಗಿತ್ತು. ಈ ವೇಳೆ ಕನ್ನಡ ಹಾಡು ಹಾಕಿದ್ದಕ್ಕೆ ಜಗಳ ತೆಗೆದಿದ್ದಾರೆ. ಇದನ್ನೂ ಓದಿ: ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ
Advertisement
Advertisement
ಪಬ್ ಮಾಲೀಕ ರವಿಕಾಂತ್ ನೀಡಿದ ದೂರಿನನ್ವಯ ಎಫ್‌ಐಆರ್ (FIR) ದಾಖಲು ಮಾಡಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಪಬ್ ಮ್ಯಾನೇಜರ್ ದೂರು ನೀಡಿದ್ದು, ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ
Advertisement
Web Stories