ಧಾರವಾಡ: ಯುವತಿಯೊಬ್ಬಳನ್ನು ಅಪಹರಿಸಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಧಾರವಾಡ (Dharwad) ತಾಲೂಕಿನ ಸಲಕಿನಕೊಪ್ಪದಲ್ಲಿ ನಡೆದಿದೆ.
ಯುವತಿಯ ಕುತ್ತಿಗೆ ಹಾಗೂ ಕೈಗೆ ಚಾಕುವಿನಿಂದ ಇರಿಯಲಾಗಿದೆ. ಬಳಿಕ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದು, ಆಕೆ ಸ್ಥಳೀಯರ ಕಣ್ಣಿಗೆ ಕಾಣಿಸಿಕೊಂಡಿದ್ದಾಳೆ. ಬಳಿಕ ಸ್ಥಳೀಯರು ಪೊಲೀಸರಿಗೆ (Police) ಮಾಹಿತಿ ನೀಡಿದ್ದು, ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಹಮಾಸ್ ರಾಕೆಟ್ ದಾಳಿಯಿಂದ ಕೇರಳದ ಶೀಜಾ ಆನಂದ್‍ಗೆ ಗಾಯ
ಯುವತಿ ಕೊಟ್ಟ ಮಾಹಿತಿ ಪ್ರಕಾರ ಆಕೆ ಧಾರವಾಡದ ಕುರುಬರ ಬೀದಿಯ ನಿವಾಸಿಯಾಗಿದ್ದಾಳೆ. ಮಹಮ್ಮದ್ ಸಾದೀಕ್ ಎಂಬಾತ ಆಕೆಯನ್ನು ಅಪಹರಿಸಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಲ್ಲದೇ ಬೈಕ್‍ನಲ್ಲಿ ಕರೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾಳೆ. ಬಳಿಕ ನನ್ನನ್ನು ಹಿಂದಿನಿಂದ ಹಿಡಿದು ಅಪಹರಿಸಿದ್ದು, ನನಗೆ ಇಲ್ಲಿಗೆ ಹೇಗೆ ಬಂದೆ ಎಂದು ತಿಳಿಯುತ್ತಿಲ್ಲ ಎಂದಿದ್ದಾಳೆ. ಅಲ್ಲದೇ ಯುವತಿ ಪದೇ ಪದೇ ಹೇಳಿಕೆ ಬದಲಿಸುತ್ತಿದ್ದಾಳೆ.
ಈ ಸಂಬಂಧ ಧಾರವಾಡದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ನಾನು ‘ಹಿಟ್ ಅಂಡ್ ರನ್’ ಮಾಡಿಲ್ಲ: ನಟ ನಾಗಭೂಷಣ್
Web Stories