ಚಂಡೀಗಢ: ಆಮ್ ಆದ್ಮಿ ಪಕ್ಷದ (AAP) ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ (Punjab) ಫಿರೋಜ್‌ಪುರ (Ferozepur) ಜಿಲ್ಲೆಯ ಮಮ್ದೋಟ್ (Mamdot) ಪಟ್ಟಣದಲ್ಲಿ ನಡೆದಿದೆ.
ಗುರುಪ್ರೀತ್ ಸಿಂಗ್ ಗೋಪಿ ಹತೆಯಾದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ. ಇದನ್ನೂ ಓದಿ: ನೇಪಾಳ ಪ್ರವಾಹ ದುರಂತ – 3 ದಿನ ಮಣ್ಣಿನಡಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ
ಗುರುಪ್ರೀತ್ ಹಾಗೂ ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅವರ ಕೆಲ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಹಿಂಬಾಲಿಸುತ್ತಿದ್ದರು. ದುಷ್ಕರ್ಮಿಗಳು ಆ ಕಾರಿನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹಿಂದೆ ಹಳೆಯ ವಿವಾದವೊಂದು ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ವಿವಾದ ಪ್ರಮುಖ ಕಾರಣವಾಗಿರಬಹುದು ಎಂಬ ಕೋನದಲ್ಲಿ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: Exclusive | ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆ
ಘಟನೆ ನಡೆದಿದ್ದು ಹೇಗೆ?
ಗುರುಪ್ರೀತ್ ಮತ್ತು ಹರ್‌ಪ್ರೀತ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ. ಬಳಿಕ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಅವರ ಸ್ನೇಹಿತರು ಪ್ರಯಾಣಿಸುತ್ತಿದ್ದ ಮತ್ತೊಂದು ಕಾರಿನ ಮೇಲೂ ಗುಂಡು ಹಾರಿಸಲಾಗಿದೆ. ಇದನ್ನೂ ಓದಿ: Public TV Exclusive | ಕೆಪಿಎಸ್‌ಸಿ ನೇಮಕಾತಿ ಹಗರಣ – IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್
ಮತ್ತೊಂದು ವಾಹನದ ಮೇಲೆ ಗುಂಡಿನ ದಾಳಿ ನಡೆಸಿರುವ ಹಿಂದಿನ ಕಾರಣ ಏನು ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎರಡೂ ಕಡೆಯವರ ನಡುವೆ ಹಳೆಯ ವಿವಾದವಿತ್ತು. ದಾಳಿಕೋರರನ್ನು ಗುರುತಿಸಲಾಗಿದೆ. ಅವರನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು, ಎಂದು ಭೂಪಿಂದರ್ ಸಿಂಗ್ ಸಿಧು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸ್ಯನಟ ಚಿಕ್ಕಣ್ಣ-ಪಾವನಾ ಅದ್ಧೂರಿ ರಿಸೆಪ್ಷನ್; ಗಣ್ಯರು, ಸಿನಿತಾರೆಯರಿಂದ ವಿಶ್
ಪ್ರಮುಖ ಆರೋಪಿ ಈಗಾಗಲೇ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಸದ್ಯ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದು, ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಗುಂಡಿನ ದಾಳಿಯ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ
