ಒಂದೇ ವಾರದಲ್ಲಿ 2500ಕ್ಕೂ ಹೆಚ್ಚು ಸೈನಿಕರ ರಾಜೀನಾಮೆ
ಇಸ್ಲಾಮಾಬಾದ್: ಬಲೂಚಿಸ್ತಾನ (Balochistan) ಸೇರಿದಂತೆ ಪಾಕಿಸ್ತಾನದ (Pakistan) ಅನೇಕ ಕಡೆಗಳಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕರ ದಾಳಿಯಿಂದ ಪಾಕ್ ಯೋಧರು (Pakistan Army) ಸೇನೆಗೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಒಂದೇ ವಾರದಲ್ಲಿ 2500ಕ್ಕೂ ಹೆಚ್ಚು ಸೈನಿಕರು ರಾಜೀನಾಮೆ ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಈ ವಿಚಾರದ ಬಗ್ಗೆ ಪಾಕ್ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.
ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಈ ದಾಳಿಗಳಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿರುವುದೇ ಇತರರು ರಾಜೀನಾಮೆ ನೀಡಲು ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಪುಲ್ವಾಮಾ ಸ್ಟೈಲ್ ದಾಳಿ – ಪಾಕ್ 90 ಸೈನಿಕರ ಹತ್ಯೆ: ಬಲೂಚ್ ಲಿಬರೇಶನ್ ಆರ್ಮಿ ಘೋಷಣೆ
ಮಾ.16ರಂದು ಪಾಕ್ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಪುಲ್ವಾಮಾ ಮಾದರಿಯ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 90 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಲ್‌ಎ ಹೇಳಿಕೊಂಡಿತ್ತು. ಪಾಕಿಸ್ತಾನದಲ್ಲಿ ಭದ್ರತಾ ವ್ಯವಸ್ಥೆ ಬಹಳ ಕಳಪೆಯಾಗಿದೆ. ಇದಕ್ಕಾಗಿ ಸೇನೆ ತೊರೆಯುತ್ತಿರುವ ಯೋಧರು ತಮ್ಮ ಜೀವ ಕಳೆದುಕೊಳ್ಳುವ ಬದಲಿಗೆ ಸೇನೆ ತೊರೆದು ವಿದೇಶಗಳಲ್ಲಿ ಉದ್ಯೋಗಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ