DistrictsKarnatakaLatestMain PostShivamogga

ಶಿವಮೊಗ್ಗದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು – ಮೂವರು ಅರೆಸ್ಟ್

ಶಿವಮೊಗ್ಗ: ನಗರದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಅನ್ಯಕೋಮಿನ ಯುವಕರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಲ್ಮಾನ್, ಅಬ್ಬಾಸ್, ಉಸ್ಮಾನ್ ಬಂಧಿತ ಆರೋಪಿಗಳು. ಯುವಕರು ಹಿಂದೂಪರ ಸಂಘಟಿತ ಕಾರ್ಯಕರ್ತ ಭರತ್ ಎಂಬಾತನ ಕೊಲೆಗೆ ಸಂಚು ರೂಪಿಸಿದ್ದರು. ಈ ಮೂವರ ಗುಂಪು ನಗರದ ನ್ಯೂ ಮಂಡ್ಲಿ ಬಡಾವಣೆ ಬಳಿ ಭರತ್ ಸಹೋದರನನ್ನು ಅಡ್ಡ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಭರತ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಭರತ್ ಸಹೋದರ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರ್ಯ ಪ್ರವೃತ್ತರಾದ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಯುವಕರ ತಂಡವು ಈ ಹಿಂದೆ ಸಹ ಹರ್ಷ್‍ನ ಹತ್ಯೆ ಪ್ರತೀಕಾರವಾಗಿ ಅನ್ಯಕೋಮಿನ ಯುವಕನ ಹತ್ಯೆಗೆ ಸಂಚು ರೂಪಿಸಿದ್ದರು. ಪೊಲೀಸರ ಕಾರ್ಯಾಚರಣೆಯಿಂದ ಎರಡು ಹತ್ಯೆಯ ಸಂಚು ವಿಫಲವಾಗಿವೆ.

Leave a Reply

Your email address will not be published.

Back to top button