ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ (College Students) ಮಾದಕ ಮಾತ್ರೆಗಳನ್ನು (Narcotic Pill) ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ (Tumakuru) ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳು. ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಆರೋಪಿಗಳು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಟಾಪೆಜೆಕ್ 100 ಎಂಜಿ, ಹಾಗೂ ಟೈಜೋಲ್-100 ಎಂಜಿ ಮಾತ್ರೆಗಳನ್ನ ಮಾರಾಟ ಮಾಡಲು ಯತ್ನಿಸಲಾಗಿತ್ತು. ಇದನ್ನೂ ಓದಿ: ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಿಲಕ್ ಪಾರ್ಕ್ ಪೊಲೀಸರು (Tilak Park Police) ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಬಳಿಯಿದ್ದ 100 ಮಾದಕ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎಂಡಿಎಂಎ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

