ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ಬೆದರಿಕೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.
ಬಂಟ್ವಾಳದ ಫರಂಗಿಪೇಟೆ ಬಳಿಕ ಶಾಸಕರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಝಳಪಿಸಿ, ಕಾರಿನ ಗಾಜುಗಳನ್ನು ಜಖಂ ಮಾಡಿದ್ದಾರೆ. ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಶಾಸಕ ಹರೀಶ್ ಪೂಂಜಾರ ಕಾರ್ ಚಾಲಕ (Car Driver) ನವೀನ್ ಪೊಲೀಸರಿಗೆ ದೂರು ನೀಡಿದ್ದರು. ಆ ಬಳಿಕ ಪೊಲೀಸರು ತನಿಖೆ ಆರಂಭಿಸಿ ಸ್ಕಾರ್ಪಿಯೋ (Scorpio) ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್
Advertisement
Advertisement
ಪ್ರಕರಣದ ಬಗ್ಗೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದರು.
Advertisement
Advertisement
ಇತ್ತ ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಹರೀಶ್ ಪೂಂಜ, ಇದರ ಹಿಂದೆ ಜಿಹಾದಿ ಶಕ್ತಿಗಳಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ. ಇದಕ್ಕೆ ನನ್ನ ಮೇಲೆ ಜಿಹಾದಿ ಶಕ್ತಿಗಳು ಹಗೆ ಸಾಧಿಸುವ ಸಾಧ್ಯತೆ ಇದೆ. ಆದರೆ ಇದಕ್ಕೆ ನಾವು ಹೆದರಲ್ಲ. ಹಿಂದುತ್ವದ ವಿಚಾರದಲ್ಲಿ ರಾಜಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಪ್ರಕರಣವನ್ನು ಅಪರಾಧ ತನಿಖಾ ದಳ (CID) ತನಿಖೆಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ