ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ (Rape Attempt) ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನಲ್ಲಿ ನಡೆದಿದೆ.
ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯುವಕ ಯತ್ನಿಸಿದ್ದಾನೆ. 23 ವರ್ಷದ ಸುರೇಶ್ ಬಂಧಿತ ಯುವಕ. ತಂದೆ ತಾಯಿ ಕೂಲಿ ಕೆಲಸಕ್ಕೆ ಹೋಗಿರುವಾಗ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ – ಆತಂಕ ಬೇಡ ಎಂದ ಸಚಿವ ಯು.ಟಿ ಖಾದರ್
ಈ ವೇಳೆ ಬಾಲಕಿಯ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದಿದ್ದಾರೆ. ಯುವಕನನ್ನು ಹಿಡಿದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭಿಸಿದ ದೆಹಲಿ ಪೊಲೀಸ್
