ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್ (HSR Layout) ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು (HSR Layout Police)ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಆರೋಪಿ ಮುಖೇಶ್ವರನ್ ವಿರುದ್ಧ 555 ಪುಟಗಳ ದೋಷಾರೋಪ ಪಟ್ಟಿಯನ್ನು 39 ಎಸಿಜೆಎಂ ಕೋರ್ಟ್ ಸಲ್ಲಿಸಿದ್ದಾರೆ. ಒಟ್ಟು 86 ಸಾಕ್ಷಿಗಳು, ಸಿಆರ್‌ಪಿಸಿ 164 ಅಡಿಯಲ್ಲಿ 4 ಜನರ ಹೇಳಿಕೆ, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆ ಕೂಡ ಚಾರ್ಜ್ ಶೀಟ್‌ನಲ್ಲಿ ದಾಖಲಿಸಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮಿಸ್ಸಿಂಗ್; ನಾಪತ್ತೆ ಹಿಂದಿದ್ಯಾ ಮಹಿಳೆ ಕೈವಾಡ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ?
ಏನಿದು ಕೇಸ್?
ಕಳೆದ ಆಗಸ್ಟ್ 17ರಂದು ರಾತ್ರಿ ಪಬ್‌ಗೆ ಬಂದಿದ್ದ ಯುವತಿ ಬೈಕ್‌ನಲ್ಲಿ ಡ್ರಾಪ್ ಪಡೆದಿದ್ದಳು. ಈ ವೇಳೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ ಮುಖೇಶ್ವರನ್ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಯುವತಿ ದೂರು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರಿಗೆ ದೂರು ನೀಡಿದ್ದರು. ಯುವತಿ ನೀಡಿದ ದೂರಿನ ಮೇರೆಗೆ ಮುಖೇಶ್ವರನ್ ವಿರುದ್ಧ ಬಿಎನ್‌ಎಸ್ 64, 117(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ರ‍್ಯಾಗಿಂಗ್ ಆರೋಪ – 10 ವೈದ್ಯರು ಸೇರಿ 59 ಮಂದಿ ಸಸ್ಪೆಂಡ್!
ಆರೋಪಿಯು ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದ ಎಂದು ಹೇಳಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸಹ ಹೆಚ್‌ಎಸ್‌ಆರ್ ಲೇಔಟ್ ಠಾಣೆಗೆ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ತಮಿಳುನಾಡು ಮೂಲದ ಮುಖೇಶ್ವರನ್ ಆಡುಗೋಡಿಯ ಚಂದ್ರಪ್ಪನಗರದಲ್ಲಿ ವಾಸವಾಗಿದ್ದ. ಬೈಕ್ ನಂಬರ್ ಅಧರಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಆಮೇಲೆ ನೋಡೋಣ – ಪರಮೇಶ್ವರ್