ಮನೆ ಮಾಲೀಕನಿಗೆ ಗುಂಡು ಹಾರಿಸಿ ದರೋಡೆಗೆ ಯತ್ನ – ಆರೋಪಿಗಳು ಅಂದರ್

Public TV
1 Min Read
attempted robbery two arrested in Tumakuru

ತುಮಕೂರು: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕುಣಿಗಲ್ ಪೊಲೀಸರು (Kunigal Police) ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಜಾರ್ಖಂಡ್ (Jharkhand) ಮೂಲದ ಏಜಾಸ್ ಮಿರ್ದಹ (30), ಸಹಿಬುಲ್ ಅನ್ಸಾರಿ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಮಾ.26 ರಂದು ಕುಣಿಗಲ್‍ನ ಉರ್ಕೆಹಳ್ಳಿ ಗ್ರಾಮದ ಗಂಗಣ್ಣ ಎಂಬುವರ ತೋಟದ ಮನೆಗೆ ಕುಡಿಯುವ ನೀರು ಕೇಳಿಕೊಂಡು ಬಂದಿದ್ದರು. ಬಳಿಕ ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ದರೋಡೆ ತಡೆಯಲು ತಡೆಯಲು ಯತ್ನಿಸಿದ್ದ ಗಂಗಣ್ಣನ ಕಾಲಿಗೆ ಗುಂಡು ಹಾರಿಸಿದ್ದರು. ಇದನ್ನೂ ಓದಿ: ಅಡಿಟರ್ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಂದೇ ಕೆಲ್ಸ ಮುಗಿಸಲು ಒತ್ತಡ ಹಾಕಿದ್ದಕ್ಕೆ ಸಹೋದ್ಯೋಗಿಗಳಿಂದಲೇ ಸುಪಾರಿ

ಈ ಸಂಬಂಧ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಬೈಕ್, ಎರಡು ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

Share This Article