ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ (Fire Crackers incident Attibele) ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
Advertisement
Advertisement
ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ – ಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ
Advertisement
Advertisement
ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಅಧಿಕಾರಿಗಳ ಅಮಾನತು ಮಾಡಲಾಗಿದೆ.
Web Stories