ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire CrackersTragedy) ಗಾಗಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ದರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಮೃತನನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಗುರುವಾರ) ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇನ್ನೇನು ದೀಪಾವಳಿ ಹತ್ತಿರ ಬರುತ್ತಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಹಾಗೂ ಈತನ ಸ್ನೇಹಿತ ಪಟಾಕಿ ಖರೀದಿಗೆ ತೆರಳಿದ್ದರು. ಅದೇ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ವೆಂಕಟೇಶ್ ಸ್ನೇಹಿತ ಪಾರಾಗಿದ್ದಾರೆ. ಆದರೆ ವೆಂಕಟೇಶ್ ಮಾತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು
ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ಗಂಭೀರಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಬಾಡಿ ಬಿಲ್ಡರ್ ಆಗಿದ್ದ ವೆಂಕಟೇಶ್ ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.
Web Stories