ಮಡಿಕೇರಿ: ಭಾನುವಾರ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಪ್ರವಾಸಿ ಉತ್ಸವ ಕಾರ್ಯಕ್ರಮಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿ ಅನುರಾಧ ಭಟ್ ಮತ್ತು ತಂಡ ನಡೆಸಿಕೊಟ್ಟ ರಸಸಂಜೆ ಕಾರ್ಯಕ್ರಮ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು.
ಇದೇ ಮೊದಲ ಬಾರಿಗೆ ಪ್ರವಾಸೋದ್ಯಮ ಇಲಾಖೆ ಕೊಡಗು ಜಿಲ್ಲಾಡಳಿತ ವತಿಯಿಂದ ನಡೆಸಿದ ಪ್ರವಾಸಿ ಉತ್ಸವಕ್ಕೆ ನೀರಿಕ್ಷೆಗೂ ಮೀರಿ ಕೊಡಗಿನ ಜನತೆ ಸೇರಿದಂತೆ ದೇಶ ವಿದೇಶದ ಜನರು ಭಾಗವಹಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 3 ದಿನ ಮಂಜಿನ ನಗರಿಯಲ್ಲಿ ಪ್ರವಾಸಿ ಉತ್ಸವ- ಕಿರುತೆರೆ ಕಲಾವಿದರು ಭಾಗಿ
Advertisement
Advertisement
ವೇದಿಕೆ ಮೇಲೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸುತ್ತಿದ್ದಂತೆ ಪ್ರೇಕ್ಷಕರ ಮೊಗದಲ್ಲಿ ಮಂದಹಾಸ ಮೂಡಿತ್ತು. ಅರ್ಜುನ್ ಜನ್ಯ ಅವರ ತಂಡ ಕಾರ್ಯಕ್ರಮ ನೀಡಿ ಮಡಿಕೇರಿ ಜನತೆಯ ಮೆಚ್ಚುಗೆಗೆ ಪಾತ್ರರಾದರು. ಇದನ್ನೂ ಓದಿ: ಕೊಡಗು ಉತ್ಸವ- ರಾಜಾಸೀಟ್‍ನಲ್ಲಿ ಫಲಪುಷ್ಪಗಳ ಕಲರವ
Advertisement
ಮೂರು ದಿನಗಳ ಕಾಲ ನಡೆದ ಈ ಕೊಡಗು ಉತ್ಸವಕ್ಕೆ ರಾಜಾಸೀಟ್‍ನಲ್ಲಿ ಬಗೆ ಬಗೆಯ ಹೂಗಳಿಂದ ಹೂಗಳಿಂದ ಕಲಾಕೃತಿಗಳನ್ನು ಮಾಡಲಾಗಿತ್ತು. ಬಗೆ ಬಗೆಯ ಹೂಗಳಿಂದ ರಾಜಾಸೀಟ್ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿತ್ತು.
Advertisement
ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಆಶ್ರಯದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿ ಉತ್ಸವ ನಡೆಸಿತ್ತು. ಆಗಸ್ಟ್ ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಕಹಿ ನೆನಪಿನಿಂದ ಜಿಲ್ಲೆಯ ಜನತೆಯನ್ನು ಹೊರತರಲು ಹಾಗೂ ಕುಸಿದು ಬಿದ್ದಿರುವ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರವಾಸಿ ಉತ್ಸವವನ್ನು ಆಯೋಜಿಸಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv