ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಮಾಡಿದೆ ಎನ್ನಲಾದ ಆಡಿಯೋ ಪ್ರಕರಣ ಇಂದು ಕೂಡ ವಿಧಾಸಭಾ ಕಲಾಪದಲ್ಲಿ ಸದ್ದು ಮಾಡಿದ್ದು, ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ಒಪ್ಪಿಸಬೇಡಿ. ನಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ವಿನಂತಿ ಮಾಡಿಕೊಂಡಿದ್ದಾರೆ.
Advertisement
ನಮ್ಮಿಂದ ತಪ್ಪಾಗಿದೆ. ಪ್ಲೀಸ್ ಬಿಟ್ಟುಬಿಡಿ. ಎಸ್‍ಐಟಿ ತನಿಖೆ ಬೇಡವೇ ಬೇಡ ಎಂದು ಹೇಳುವ ಮೂಲಕ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ನಾಯಕರು ಪದೇ ಪದೇ ತಪ್ಪಾಗಿದೆ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಿಮ್ಮ ಗೆಳೆಯನಾಗಿ ನಾನು ವಿನಂತಿ ಮಾಡುತ್ತೇನೆ. ನಿಮ್ಮ ಹಿತೈಷಿಯಾಗಿ ಹೇಳುತ್ತಿದ್ದೇನೆ. ದಯಮಾಡಿ ನಿಲ್ಲಿಸಿ. ನಮ್ಮ ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತೇವೆ. ಹೀಗಾಗಿ ತಮ್ಮ ನಿರ್ಧಾರ ಮರುಪರಿಶೀಲಿಸಿ ಎಂದು ಮಾಧುಸ್ವಾಮಿ ಅವರು ಬಿಎಸ್‍ವೈ ಪರ ಬ್ಯಾಟಿಂಗ್ ಮಾಡಿದ್ದಾರೆ.
Advertisement
Advertisement
ಸೋಮವಾರದ ಕಲಾಪದಲ್ಲಿ ಭಾರೀ ಚರ್ಚೆಯ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರು ಈ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರಿಗೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಬಿಜೆಪಿ ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಯಾವುದೇ ಕಾರಣಕ್ಕೂ ಎಸ್‍ಐಟಿ ತನಿಖೆಗೆ ಒಪ್ಪಿಸಬೇಡಿ ಎಂದು ಶಾಸಕ ಮಾಧುಸ್ವಾಮಿಯವರು ಆಗ್ರಹಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv