ಭಾರೀ ಮೊತ್ತಕ್ಕೆ ‘F0R REGN’ ಚಿತ್ರದ ಆಡಿಯೋ ಹಕ್ಕು ಸೇಲ್

Public TV
1 Min Read
FotoJet 13

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು,   ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

FotoJet 2 8

ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರಬಾಕಿಯಿದ್ದು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ” ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರದ  ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.  ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

FotoJet 1 9

ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *