ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana) ಅಗಲಿಕೆ ಹಿನ್ನೆಲೆ ಇಂದು (ಆಗಸ್ಟ್ 16)ರಂದು ಉತ್ತರಕ್ರಿಯೆ (Uttara Kriya) ವಿಧಿವಿಧಾನ ನಡೆಯುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದಲ್ಲಿ ಸರ್ವರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ.
ಉತ್ತರಕ್ರಿಯೆ ಇಂದು (ಆಗಸ್ಟ್ 16) ಬೆಳಿಗ್ಗೆ 8:30ರಿಂದ ಸ್ಪಂದನಾ ಸ್ವಗೃಹದಲ್ಲಿ ಶಾಂತಿ ಹೋಮ ನಡೆಯುತ್ತಿದೆ. ಬಳಿಕ 11:30ರ ನಂತರ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ (ಬಿಬಿಎಂಪಿ ಮೈದಾನ) ಭೋಜನ ಆರಂಭವಾಗಲಿದೆ. ಮನೆಮಗಳು ಸ್ಪಂದನಾ ಆತ್ಮಕ್ಕೆ ಚಿರಶಾಂತಿ ಕೋರಲು ಸರ್ವರಿಗೂ ಭಾಗಿಯಾಗುವಂತೆ ಬಿ.ಕೆ ಶಿವರಾಂ ಮತ್ತು ಎಸ್.ಎ ಚಿನ್ನೆಗೌಡರು ಮತ್ತು ಕುಟುಂಬಸ್ಥರು ಸರ್ವರಿಗೂ ಆಹ್ವಾನ ನೀಡಿದ್ದರು.
ಸುಮಾರು 4000 ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ವಿಐಪಿ- ಸಾರ್ವಜನಿಕರಿಗೆ ಬೇರೆ ಬೇರೆ ಊಟದ ವ್ಯವಸ್ಥೆ ಮಾಡಲಾಗಿದೆ. 80ಕ್ಕೂ ಹೆಚ್ಚು ಅಡುಗೆಯವರಿಂದ ಭೋಜನ ತಯಾರಿ ಮಾಡಿಸಿದ್ದಾರೆ. ಬರುವ ಗೆಸ್ಟ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸಹ ಮಾಡಲಿದ್ದು, ಪೊಲೀಸ್ ಸಿಬ್ಬಂದಿಗಳು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ಆಗಸ್ಟ್ 16ರಂದು ಸ್ಪಂದನಾ ಉತ್ತರಕ್ರಿಯೆ- ನಾಳೆಗೆ ಸಿದ್ಧತೆ ಹೇಗಿದೆ?
ಭೋಜನಕ್ಕೆ ಉಪ್ಪಿಟ್ಟು, ಪಲಾವ್, 2500 ಲಡ್ಡು, ಮಸಾಲಾ ವಡೆ, ಉದ್ದಿನ ವಡೆ, ಕೊಸಂಬರಿ, ಅನ್ನದ ಜೊತೆ ತರಕಾರಿ ಸಾರು ಮತ್ತು ತಿಳಿಸಾರು ಹಾಗೂ ಪಾಯಸ, ಮೊಸರು, ಹಪ್ಪಳ, ಆಬೊಂಡೆ ಸೇರಿದಂತೆ 21 ಬಗೆಯ ವಿವಿಧ ಖಾದ್ಯಗಳ ತಯಾರಿ ಮಾಡಲಾಗಿದೆ.
ಆಗಸ್ಟ್ 6ರಂದು ಭಾನುವಾರ ಬ್ಯಾಕಾಂಕ್‌ನಲ್ಲಿ ಹೃದಯಾಘಾತದಿಂದ (Heart Attack) ಸ್ಪಂದನಾ (Spandana) ನಿಧನರಾಗಿದ್ದರು. ಆಗಸ್ಟ್ 9ರಂದು ಬೆಂಗಳೂರಿನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.