ಲಂಡನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡದ ಅಭಿಯಾನ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇಲ್ಲಿನ ಲಾರ್ಡ್ಸ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಭಾರತೀಯ ಮಹಿಳಾ ತಂಡ, ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಇದರೊಂದಿಗೆ ಟಿ20 ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿದೆ.
ಭಾರತೀಯ ಮಹಿಳಾ ತಂಡ 2018, 2020 ರ ಬಳಿಕ ಕೊನೆಯದ್ದಾಗಿ 2023 ರಲ್ಲಿ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಿತ್ತು.

ಐತಿಹಾಸಿಕ ಲಾರ್ಡ್ಸ್ ಅಂಗಳದಲ್ಲಿ ನಡೆದ ನಾಕೌಟ್ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ ಸ್ಫೋಟಕ ಫಿಫ್ಟಿ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿತ್ತು. ಸ್ಪರ್ಧಾತ್ಮಕ ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 19 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 172 ರನ್ ಚಚ್ಚಿ ಸೆಮಿ ಫೈನಲ್‌ಗೆ ಲಗ್ಗೆಯಿಟ್ಟಿತು.
ಗಾರ್ಡ್ನರ್ – ಪೆರ‍್ರಿ ಆಟಕ್ಕೆ ಪತರುಗುಟ್ಟಿದ ಭಾರತ
171 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾಗೆ ಭಾರತ ಆರಂಭದಲ್ಲೇ ಆಘಾತ ನೀಡಿತು. 2ನೇ ಎಸೆತದಲ್ಲೇ ಆರಂಭಿಕ ಆಟಗಾರ್ತಿ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾವನ್ನು ಭಾರತೀಯ ಬೌಲರ್‌ಗಳು ಒತ್ತಡಕ್ಕೆ ಸಿಲುಕಿಸಿದರು. ರೇಣುಕಾ ಸಿಂಗ್ ಹಾಗೂ ದೀಪ್ತಿ ಶರ್ಮಾ ಶಿಸ್ತುಬದ್ಧ ಬೌಲಿಂಗ್ ಮೂಲಕ ಆಸ್ಟ್ರೇಲಿಯಾವನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬಂದ ಪೆರ‍್ರಿ ಹಾಗೂ ಆಶ್ಲೆ ಗಾರ್ಡ್ನರ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪಂದ್ಯದ ದಿಕ್ಕನ್ನೇ ಬದಲಿಸಿತು. ಕೊನೆಯ ಹಂತದಲ್ಲಿ ವೇಗವಾಗಿ ರನ್ ಗಳಿಸಿದ ಆಸ್ಟ್ರೇಲಿಯಾ ಭಾರತವನ್ನು ಮಣಿಸಿ ಸೆಮಿಫೈನಲ್‌ಗೇರಿತು.

4ನೇ ವಿಕೆಟ್‌ಗೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಗಾರ್ಡ್ನರ್ – ಪೆರ‍್ರಿ 59 ಎಸೆತಗಳಲ್ಲಿ ಭರ್ಜರಿ ಶತಕದ ಜೊತೆಯಾಟ ನೀಡಿದರು. ಇದು ಸುಲಭವಾಗಿ ಭಾರತದ ವಿರುದ್ಧ ಗೆಲುವು ಸಾಧಿಸುವಂತೆ ಮಾಡಿತು.
ಆಸ್ಟ್ರೇಲಿಯಾ ಪರ ಎಲ್ಲಿಸ್ ಪೆರ‍್ರಿ 38 ಎಸೆತಗಳಲ್ಲಿ 56 ರನ್ ಚಚ್ಚಿದ್ರೆ, ಆಶ್ಲೇ ಗಾರ್ಡ್ನರ್ 29 ಎಸೆತಗಳಲ್ಲಿ ಸ್ಫೋಟಕ 53 ರನ್ ಬಾರಿಸಿದರು. ಇನ್ನುಳಿದಂತೆ ಬೆತ್ ಮೂನಿ 22 ರನ್, ಫೋಬೆ ಲಿಚ್‌ಫೀಲ್ಡ್ 24 ರನ್, ಜಾರ್ಜಿಯಾ ವೋಲ್ ಹಾಗೂ ಜಾರ್ಜಿಯಾ ವೇರ್‌ಹ್ಯಾಮ್ ತಲಾ 4 ರನ್ ಕೊಡುಗೆ ನೀಡಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 170/4 ರನ್‌ಗಳ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತು. ಆರಂಭಿಕ ಹಂತದಲ್ಲಿ ವಿಕೆಟ್‌ಗಳು ಬೀಳುತ್ತಿದ್ದರೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಜವಾಬ್ದಾರಿಯುತ ಹಾಗೂ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಜೆಮಿಮಾ ರೋಡ್ರಿಗ್ಸ್ ಅವರೊಂದಿಗೆ ಉತ್ತಮ ಜೊತೆಯಾಟ ಕಟ್ಟಿದ ಹರ್ಮನ್ ಇನ್ನಿಂಗ್ಸ್ ಕೊನೇ ಓವರ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸುವ ಮೂಲಕ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಆದ್ರೆ ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನ (37 ಎಸೆತಗಳಲ್ಲಿ 38 ರನ್), ಶೆಫಾಲಿ ವರ್ಮಾ (26 ಎಸೆತಗಳಲ್ಲಿ 34 ರನ್), ಜೆಮಿಮಾ (28 ಎಸೆತಗಳಲ್ಲಿ 34 ರನ್) ನಿಧಾನಗತಿಯ ಬ್ಯಾಟಿಂಗ್ ನಡೆಸಿದರು. ಇದರಿಂದ ರನ್ ವೇಗವೂ ಕುಂಟಿತಗೊಂಡಿರು.
