ಕ್ಯಾನ್‌ಬೆರಾ: ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿರುವ ಆನ್‌ಲೈನ್ ಕಾಮೆಂಟ್ ಬಗ್ಗೆ ಆಸ್ಟ್ರೇಲಿಯಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜುಲೈ 9 ರಂದು ಮೆಲ್ಬೋರ್ನ್‌ಗೆ ಭೇಟಿ ನೀಡುವ ಕೆಲವೇ ದಿನಗಳ ಮೊದಲು ಮೋದಿಯವರನ್ನು ಗುರಿಯಾಗಿಸಿಕೊಂಡು ಆನ್‌ಲೈನ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದ ಐಪಿ ವಿಳಾಸವನ್ನು ತನಿಖಾಧಿಕಾರಿಗಳು ಗುರುತಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜು.20 ರಿಂದ ಸಂಸತ್ ಮುಂಗಾರು ಅಧಿವೇಶನ – ನೀಟ್, ಮಹಿಳಾ ಮೀಸಲಾತಿ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ
ಮೆಲ್ಬೋರ್ನ್‌ನ ಮಾರ್ವೆಲ್ ಕ್ರೀಡಾಂಗಣದಲ್ಲಿ ನಡೆಯಲಿರುವ “ಮೆಲ್ಬೋರ್ನ್ ಮೀಟ್ಸ್ ಮೋದಿ” ಸಮುದಾಯ ಕಾರ್ಯಕ್ರಮದ ಪ್ರಚಾರದ ಫೇಸ್‌ಬುಕ್ ಪೋಸ್ಟ್‌ಗೆ ಕೊಲೆ ಬೆದರಿಕೆ ಕಾಮೆಂಟ್ ಮಾಡಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ.
ಅಬು ಮುಸ್ತಫಾ ಎಂಬ ಖಾತೆಯಿಂದ ಈ ಕಾಮೆಂಟ್ ಪೋಸ್ಟ್ ಮಾಡಲಾಗಿದೆ. ʻಅವರು ತಮ್ಮ ಸಾವಿಗೆ ಆಸ್ಟ್ರೇಲಿಯಾಕ್ಕೆ ಬರುತ್ತಾರೆʼ ಎಂದು ಕಾಮೆಂಟ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಧಾನಿ ಮೋದಿ ಅವರ ಆಸ್ಟ್ರೇಲಿಯಾದ ಅಧಿಕೃತ ಭೇಟಿಗೆ ಕೆಲವು ದಿನಗಳ ಮೊದಲು ಈ ಬೆದರಿಕೆ ಬಂದಿದೆ. ಪ್ರಧಾನಿ ಮೋದಿಯವರು ಮೆಲ್ಬೋರ್ನ್ ಸಭೆ ಸೇರಿದಂತೆ ದ್ವಿಪಕ್ಷೀಯ ಕಾರ್ಯಕ್ರಮಗಳು ಮತ್ತು ಸಮುದಾಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: 480 ಕೋಟಿ ರೂ. ವೆಚ್ಚದ ಜೋಧ್‌ಪುರ ಏರ್‌ಪೋರ್ಟ್ ಟರ್ಮಿನಲ್ ಉದ್ಘಾಟಿಸಿದ ಮೋದಿ
