ಅಮರಾವತಿ: ಮಿಚೆಲ್ ಸ್ಟಾರ್ಕ್ (Mitchell Starc) ಮಾರಕ ಬೌಲಿಂಗ್ ದಾಳಿ, ಮಿಚೆಲ್ ಮಾರ್ಷ್ (Mitchell Marsh) ಹಾಗೂ ಟ್ರಾವಿಸ್ ಹೆಡ್ ಸ್ಫೋಟಕ ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಭಾರತದ (Team India) ವಿರುದ್ಧ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 1-1 ರಲ್ಲಿ ಗೆದ್ದು ಸಮಬಲ ಸಾಧಿಸಿದೆ.
ವಿಶಾಖಪಟ್ಟಣದ ವೈ.ಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ (Australia), ರೋಹಿತ್ (Rohit Sharma) ಪಡೆಯನ್ನ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 118 ರನ್‌ಗಳ ಗುರಿ ಪಡೆದ ಆಸ್ಟ್ರೇಲಿಯಾ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ನಡೆಸಿ 11 ಓವರ್‌ಗಳಲ್ಲಿ 121 ರನ್ ಗಳಿಸಿ ಜಯ ಸಾಧಿಸಿತು. ಇದನ್ನೂ ಓದಿ: 750,000 ಡಾಲರ್ ಅಂದ್ರೆ ಎಷ್ಟು ಅಂತ ಗೊತ್ತಿರಲಿಲ್ಲ- ಕಾರು ಖರೀದಿಯ ಬಗ್ಗೆ ಯೋಚಿಸಿದ್ದ ರೋಹಿತ್
Advertisement
Advertisement
ಆರಂಭಿಕರಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ ವಿಕೆಟ್ ಬಿಟ್ಟುಕೊಡದಂತೆ ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಮಾರ್ಷ್ 36 ಎಸೆತಗಳಲ್ಲಿ ಸ್ಫೋಟಕ 66 ರನ್ (6 ಸಿಕ್ಸರ್, 6 ಬೌಂಡರಿ) ಗಳಿಸಿದ್ರೆ, ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 10 ಬೌಂಡರಿಯೊಂದಿಗೆ 51 ರನ್ ಚಚ್ಚಿ ಜಯದ ಹಾದಿ ತಲುಪಿಸಿದರು.
Advertisement
ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ದಾಳಿ ನಡೆಸಿ, ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಇದರಿಂದ ಮೊದಲ ಪಂದ್ಯದಲ್ಲಿ 188 ರನ್‌ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ದ ಭಾರತ, 2ನೇ ಪಂದ್ಯದಲ್ಲಿ ಹೀನಾಯ ಸೋಲನುಭವಿಸಬೇಕಾಯಿತು. ಇದನ್ನೂ ಓದಿ: IPL 2023: ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ದರೆ ಖುಷಿ – ಭಾರತದ ಮಾಜಿ ಕ್ರಿಕೆಟಿಗ ಭವಿಷ್ಯ
Advertisement
ಮೊದಲ ಓವರ್‌ನ 3ನೇ ಎಸೆತದಲ್ಲಿಯೇ ಶುಭಮನ್ ಗಿಲ್ ಔಟಾದರು. ಈ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮೊದಲ ಪಂದ್ಯದಲ್ಲಿ ಶೂನ್ಯ ಸುತ್ತಿದ್ದ ಸೂರ್ಯಕುಮಾರ್ ಯಾದವ್ (Suryakumar Yadav) 2ನೇ ಪಂದ್ಯದಲ್ಲೂ ಶೂನ್ಯಕ್ಕೆ ಔಟಾದರು. ಕಳೆದ ಪಂದ್ಯದಲ್ಲಿ ಮ್ಯಾಚ್ ವಿನ್ನರ್ ಆಗಿದ್ದ ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿದರೆ, ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ (31 ರನ್ ಗಳಿಸಿ) ಸಹ ನಥನ್ ಎಲ್ಲಿಸ್‌ಗೆ ವಿಕೆಟ್ ಒಪ್ಪಿಸಿದರು.
ಈ ಬೆನ್ನಲ್ಲೇ ಉಪನಾಯಕ ಹಾರ್ದಿಕ್ ಪಾಂಡ್ಯ 1 ರನ್, ರವೀಂದ್ರ ಜಡೇಜಾ 16 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 29 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ತಲುಪಿಸುವಲ್ಲಿ ಯಶಸ್ವಿಯಾದರು.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 8 ಓವರ್‌ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಿತ್ತರೆ, ಸೀನ್ ಅಬೋಟ್ 6 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ನಥನ್ ಎಲ್ಲಿಸ್ 5 ಓವರ್‌ಗಳಲ್ಲಿ 13 ರನ್ ನೀಡಿ ಉಳಿದ 2 ವಿಕೆಟ್ ಕಬಳಿಸಿದರು.