ಬ್ರಿಸ್ಬೇನ್: ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ 5 ಪಂದ್ಯಗಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 297 ರನ್‌ಗಳಿಗೆ ಆಲೌಟ್ ಆಯ್ತು. 20 ರನ್‌ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 5.1 ಓವರ್‌ನಲ್ಲಿ 1 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.
Advertisement
Advertisement
ಆಸ್ಟ್ರೇಲಿಯಾದ ಆಫ್ ಸ್ಪಿನ್ನರ್ ನಥನ್ ಲಿಯಾನ್ ಇಂಗ್ಲೆಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ 400 ವಿಕೆಟ್ ಪಡೆದು ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ 17ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
Advertisement
ಇಂಗ್ಲೆಂಡ್ ವಿರುದ್ಧದ 73ನೇ ಓವರ್‌ನಲ್ಲಿ 400ನೇ ವಿಕೆಟ್‌ನ್ನು ಪಡೆದರು. ಲಿಯಾನ್ 91 ರನ್‌ಗಳನ್ನು ನೀಡಿ 4 ವಿಕೆಟ್‌ಗಳನ್ನು ಪಡೆದು ಇಂಗ್ಲೆಂಡ್ ಆಟಗಾರರನ್ನು ಕಟ್ಟಿಹಾಕಿದರು. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ
Advertisement
ಲಿಯಾನ್ ತನ್ನ 101ನೇ ಟೆಸ್ಟ್‌ನಲ್ಲಿ, ಈ ಸಾಧನೆ ಮಾಡಿದ್ದಾರೆ. ಇಂಗ್ಲೆಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಲಿಯಾನ್ ಅವರು ಡೇವಿಡ್ ಮಲಾನ್ ಅವರ ವಿಕೆಟ್ ಪಡೆಯುವ ಮೂಲಕ 400 ವಿಕೆಟ್‌ಗಳನ್ನು ಪಡೆದ 17ನೇ ಆಟಗಾರರಾಗಿ ಹೊಮ್ಮಿದ್ದಾರೆ. ಶೇನ್ ವಾರ್ನ್ ಮತ್ತು ಗ್ಲೇನ್ ಮೆಕ್‌ಗ್ರಾತ್ ನಂತರ ಆಸ್ಟ್ರೇಲಿಯಾ ಬೌಲರ್‌ಗಳಲ್ಲಿ ಮೂರನೇ ಆಟಗಾರರಾಗಿ ಲಿಯಾನ್ ಹೊರಹೊಮ್ಮಿದ್ದಾರೆ. ಇದನ್ನೂ ಓದಿ: ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು
ಶೇನ್ ವಾರ್ನ್(708) ಅಗ್ರಸ್ಥಾನದಲ್ಲಿದ್ದರೆ, ಮಾಜಿ ಬೌಲಿಂಗ್ ದಿಗ್ಗಜ ಮೆಕ್‌ಗ್ರಾತ್(563) ಎರಡನೇ ಸ್ಥಾನದಲ್ಲಿದ್ದಾರೆ. ಡೆನ್ನಿಸ್ ಲಿಲ್ಲಿ (355) ಮತ್ತು ಮಿಚೆಲ್ ಜಾನ್ಸನ್ (313) ಕ್ರಮವಾಗಿ ಪಟ್ಟಿಯಲ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.