ಸಿಡ್ನಿ: ಅಫ್ಘಾನಿಸ್ತಾನ (Afghanistan) ವಿರುದ್ಧ ಏಕದಿನ ಸರಣಿ (ODI) ಆಡಬೇಕಾಗಿದ್ದ ಆಸ್ಟ್ರೇಲಿಯಾ (Australia) ತಂಡ ಇದೀಗ ಈ ಸರಣಿಯಿಂದ ಹಿಂದೆ ಸರಿದಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ (Taliban) ಆಡಳಿತ ಕಂಡು ಮುನಿಸಿಕೊಂಡಿರುವ ಆಸ್ಟ್ರೇಲಿಯಾ ಈ ನಿರ್ಧಾರ ತೆಗೆದುಕೊಂಡಿದೆ.
Advertisement
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಬೇಸತ್ತು, ಈ ನಿರ್ಧಾರಕ್ಕೆ ಮುಂದಾಗಿದೆ. ತಾಲಿಬಾನ್ ಸರ್ಕಾರ ಅಲ್ಲಿನ ಮಹಿಳೆಯರ ಹಕ್ಕನ್ನು ಕಸಿದುಕೊಳ್ಳುತ್ತಿದ್ದು, ಮಹಿಳೆಯ ಶಿಕ್ಷಣ ಸೇರಿದಂತೆ ಉದ್ಯೋಗಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ಆಕ್ಷೇಪಗಳು ಕೇಳಿಬರುತ್ತಿದೆ. ಹಾಗಾಗಿ ಮಹಿಳೆಯ ಹಕ್ಕನ್ನು ಹತ್ತಿಕ್ಕುತ್ತಿರುವ ತಾಲಿಬಾನ್ ಕ್ರಮವನ್ನು ಖಂಡಿಸಿ ಈ ನಿರ್ಧಾರ ತೆಗದುಕೊಂಡಿದೆ. ಇದನ್ನೂ ಓದಿ: 6ನೇ ತರಗತಿಯೊಳಗಿನ ಹೆಣ್ಣು ಮಕ್ಕಳಿಗೆ ಮಾತ್ರ ಶಿಕ್ಷಣ – ಮಹಿಳಾ ಶಿಕ್ಷಣಕ್ಕೆ ತಾಲಿಬಾನ್ ಅಸ್ತು
Advertisement
Advertisement
ಆಸ್ಟ್ರೇಲಿಯಾ ಮಹಿಳೆಯರ ಹಕ್ಕು ಮತ್ತು ಮಹಿಳೆಯರು ಕೂಡ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಂಪೂರ್ಣ ಬೆಂಬಲ ನೀಡುತ್ತದೆ. ಆದರೆ ತಾಲಿಬಾನ್ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಶಿಕ್ಷಣ ಸಹಿತ ಉದ್ಯೋಗಕ್ಕೆ ನಿಷೇಧ ಹೇರಿತ್ತು. ಪಾರ್ಕ್ ಮತ್ತು ಜಿಮ್‍ಗೆ ತೆರಳಬಾರದೆಂದು ಸೂಚಿಸಿತ್ತು. ಇದನ್ನು ವಿರೋಧಿಸಿ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಈ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಮಹಿಳೆಯರ ಪರ ಬೆಂಬಲ ವ್ಯಕ್ತಪಡಿಸಿ ಅಘ್ಫಾನಿಸ್ತಾನ ವಿರುದ್ಧ ಕ್ರಿಕೆಟ್ ಸರಣಿ ಆಡದಿರಲು ನಿರ್ಧರಿಸಿದೆ.
Advertisement
ಮಾರ್ಚ್‍ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ದುಬೈನಲ್ಲಿ ಏಕದಿನ ಸರಣಿ ಆಡಬೇಕಾಗಿತ್ತು. ಈ ಸರಣಿ ರದ್ದುಗೊಳ್ಳುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಈಡನ್ ಗಾರ್ಡನ್ಸ್‌ನಲ್ಲಿ 2ನೇ ಏಕದಿನ ಪಂದ್ಯ – ಸರಣಿ ಗೆಲ್ಲುವ ತವಕದಲ್ಲಿ ಭಾರತ, ಪುಟಿದೇಳುವ ವಿಶ್ವಾಸದಲ್ಲಿ ಲಂಕಾ
Cricket Australia is committed to supporting growing the game for women and men around the world, including in Afghanistan, and will continue to engage with the Afghanistan Cricket Board in anticipation of improved conditions for women and girls in the country. pic.twitter.com/cgQ2p21X2Q
— Cricket Australia (@CricketAus) January 12, 2023
ಇತ್ತ ತಾಲಿಬಾನ್ ನಡೆ ಕಂಡು ಅಲ್ಲಿನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದ್ದರು. ಈ ಬೆನ್ನಲ್ಲೇ ಪದವಿ ಕಾಲೇಜಿನ ಪುರುಷ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿದ್ದರು. ಮಹಿಳಾ ವಿದ್ಯಾರ್ಥಿಗಳು ಹಾಜರಾಗುವವರೆಗೂ ನಾವೂ ಹಾಜರಾಗುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದರು. ಮಹಿಳೆಯರಿಗೆ ಬುರ್ಕಾ ನಿಷೇಧ ಹೇರಿದ್ದ ಬೆನ್ನಲ್ಲೇ ಮಹಿಳಾ ಶಿಕ್ಷಣ (Women Education) ನಿಷೇಧಿಸಿದ್ದ ತಾಲಿಬಾನ್ (Taliban) ಇದೀಗ ಮತ್ತೆ ಮಹಿಳಾ ಶಿಕ್ಷಣ ಮುಂದುವರಿಸುವ ನಿರ್ಧಾರ ಕೈಗೊಂಡಿದೆ. 1 ರಿಂದ 6ನೇ ತರಗತಿ ವರೆಗಿನ ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ (Schools) ತಮ್ಮ ಅಧ್ಯಯನ ಮುಂದುವರಿಸಲು ಅವಕಾಶ ನೀಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k