ಅಹಮದಾಬಾದ್: ವಿಶ್ವಕಪ್ ಕ್ರಿಕೆಟ್ ಫೈನಲ್ (World Cup Cricket Final) ಪಂದ್ಯದಲ್ಲಿ ಭಾರತ (India) ಟಾಸ್ (Toss) ಸೋತಿದೆ. ಆಸ್ಟ್ರೇಲಿಯಾ (Australia) ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದು ಫೀಲ್ಡಿಂಗ್ (Fielding) ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಇಲ್ಲಿಯವರೆಗೆ 4 ಬಾರಿ ಫೈನಲ್ ಪ್ರವೇಶಿಸಿದ್ದು ಮೂರು ಬಾರಿ ಟಾಸ್ ಸೋತರೆ ಒಂದು ಬಾರಿ ಟಾಸ್ ಗೆದ್ದುಕೊಂಡಿದೆ.
Advertisement
Advertisement
1983ರ ಫೈನಲ್ನಲ್ಲಿ ಕಪಿಲ್ ದೇವ್ ಟಾಸ್ ಸೋತಿದ್ದರು. ಮೊದಲು ಬ್ಯಾಟ್ ಮಾಡಿದ್ದ ಭಾರತ 183 ರನ್ಗಳಿಗೆ ಆಲೌಟ್ ಆಗಿತ್ತು. ವಿಂಡೀಸ್ 140 ರನ್ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಬಾರಿಗೆ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
Advertisement
2003 ರಲ್ಲಿ ನಾಯಕ ಸೌರವ್ ಗಂಗೂಲಿ ಟಾಸ್ ಗೆದ್ದು ಫೀಲ್ಡಿಂಗ್ ಆರಿಸಿಕೊಂಡಿದ್ದರು. ಆಸ್ಟ್ರೇಲಿಯಾ 2 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿದ್ದರೆ ಭಾರತ 234 ರನ್ಗಳಿಗೆ ಆಲೌಟ್ ಆಗಿತ್ತು.
Advertisement
2011 ರಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡಿ 6 ವಿಕೆಟ್ ನಷ್ಟಕ್ಕೆ 274 ರನ್ ಹೊಡೆದಿತ್ತು. ನಂತರ ಬ್ಯಾಟ್ ಮಾಡಿದ ಭಾರತ 48.2 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 277 ರನ್ ಹೊಡೆಯುವ ಮೂಲಕ 6 ವಿಕೆಟ್ಗಳ ಜಯ ಸಾಧಿಸಿ ಎರಡನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್
ಟಾಸ್ ಸೋತ ಎರಡು ಫೈನಲ್ ಪಂದ್ಯಗಳನ್ನು ಭಾರತ ಗೆದ್ದುಕೊಂಡರೆ, ಟಾಸ್ ಗೆದ್ದ ಒಂದು ಫೈನಲ್ ಪಂದ್ಯವನ್ನು ಭಾರತ ಸೋತಿದೆ. ಹೀಗಾಗಿ ಈ ಬಾರಿ ಯಾವ ಫಲಿತಾಂಶ ಬರಬಹುದು ಎಂಬ ಕುತೂಹಲ ಹೆಚ್ಚಾಗಿದೆ.