Dakshina KannadaDistrictsKarnatakaLatestMain Post
ಬಂಟ್ವಾಳದಲ್ಲಿ ಕಬಡ್ಡಿ ಮ್ಯಾಚ್ ಮುಗಿಸಿ ಹಿಂತಿರುಗುತ್ತಿದ್ದ ಆಟೋ ಚಾಲಕನ ಮೇಲೆ ತಲವಾರು ದಾಳಿ

ಮಂಗಳೂರು: ಆಟೋ ಚಾಲಕನ (Auto Driver) ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30) ಹಲ್ಲೆಗೊಳಗಾದ ಆಟೋ ಚಾಲಕ. ಶಾಕೀರ್ ಕಬಡ್ಡಿ ಮ್ಯಾಚ್ (Kabadi Match) ಮುಗಿಸಿಕೊಂಡು ಮನೆಗೆ ಆಟೋದಲ್ಲಿ ಹಿಂತಿರುಗುತ್ತಿದ್ದ. ಈ ವೇಳೆ ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ಆಟೋವನ್ನು ತಡೆದು ನಿಲ್ಲಿಸಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ. ಇದನ್ನೂ ಓದಿ: ಹೋರಾಟಕ್ಕೆ ಜಯ – ಕೊನೆಗೂ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದು
ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಗನ ಅನಾರೋಗ್ಯ ನಿವಾರಿಸಿದ ಕೊರಗಜ್ಜನಿಗೆ ಉಕ್ರೇನ್ ಕುಟುಂಬದಿಂದ ಅಗೆಲು ಸೇವೆ