ಬೆಂಗಳೂರು: ಅನುಮಾನಾಸ್ಪಾದವಾಗಿ ಯುವಕನೊಬ್ಬನ ಮೃತದೇಹ, ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹೊಸಹಳ್ಳಿ ಬಳಿ ಪತ್ತೆಯಾಗಿದೆ.
ವಿಜಯ್‍ಕುಮಾರ್(23) ಮೃತ ಯುವಕ. ವಿಜಯ್‍ಕುಮಾರ್ ಹೊನ್ನೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಯಾರೋ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಮಂಗಳವಾರ ರಾತ್ರಿಯೇ ಮೃತ ವಿಜಯ್‍ಕುಮಾರ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಸ್ಥಳದಲ್ಲಿಯೇ ಆಟೋ ಅಪಘಾತವಾದ ರೀತಿಯಲ್ಲಿ ಬಿದ್ದಿದೆ. ಮುಂಜಾನೆ ಸ್ಥಳೀಯರು ನೋಡಿ ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ನೆಲಮಂಗಲ ಡಿವೈಎಸ್‍ಪಿ, ಪಿಎಸ್‍ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲಿ ಮೃತ ವಿಜಯ್ ಕುಮಾರ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.