ಆಟೋ ಚಾಲಕ ಈಗ ಪಾಲಿಕೆಯ ಮೇಯರ್

Public TV
1 Min Read
kumbakonam auto

ಚೆನ್ನೈ: ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದೀಗ ತಮಿಳುನಾಡಿನ ಕುಂಭಕೋಣಂ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

47 ವರ್ಷದ ಶರವಣನ್ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. 48 ವಾರ್ಡ್‍ಗಳಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ 42 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಇದೀಗ ಮೇಯರ್ ಆಗಿ ಶರವಣನ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯುಪಿ ಭವಿಷ್ಯ ಅಖಿಲೇಶ್ ಯಾದವ್ ಕೈಯಲ್ಲಿ ಸುರಕ್ಷಿತವಾಗಿರುತ್ತೆ: ಮಯಾಂಕ್ ಜೋಶಿ

kumbakonam auto 2

ಸರವಣನ್ ಯಾರು?: ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಶರವಣನ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಆರನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಇವರು, ಸ್ಥಳೀಯ ಜನರ ಸಮಸ್ಯೆ ಬಗೆಹರಿಸುವಲ್ಲಿ ಒಂದು ಹೆಜ್ಜೆ ಮುಂದೆ ಇದ್ದಾರೆ. ಮೇಯರ್ ಆಗಿ ಆಯ್ಕೆಯಾದ ಬಳಿಕ ಶರವಣನ್ ಪ್ರಮಾಣವಚನ ಸ್ವೀಕಾರ ಮಾಡಲು ಆಟೋದಲ್ಲಿ ಪಾಲಿಕೆಗೆ ಆಗಮಿಸಿ ಗಮನ ಸೆಳೆದರು. ಇದನ್ನೂ ಓದಿ: ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ

kumbakonam auto 1

ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ದಾಖಲಿಸಿರುವ ಸರವಣನ್ ಪಕ್ಷದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಇದೇ ಕಾರಣಕ್ಕಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ ಎಸ್ ಅಲ್‍ಗಿರಿ ಇವರ ಹೆಸರನ್ನ ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಶರವಣನ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *