ನವದೆಹಲಿ: ಮಧ್ಯ ದೆಹಲಿಯ ಐಟಿಒ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
27 ವರ್ಷದ ಮಹಿಳೆ, ಶನಿವಾರ ಬೆಳಗ್ಗೆ ಈಶಾನ್ಯ ದೆಹಲಿಯ ಖಜೂರಿ ಖಾಸ್ ಪ್ರದೇಶದಿಂದ ಕಾಶ್ಮೀರ ಗೇಟ್‍ಗೆ ಆಟೋ ಹತ್ತಿದ ನಂತರ ಚಾಲಕ ಸೇರಿದಂತೆ ಮೂವರು ಐಒಟಿ ಬಳಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಧೈರ್ಯಕ್ಕೆ ಅವರು ಹೆದರುತ್ತಾರೆ – ಪ್ರಿಯಾಂಕಾಗೆ ಧೈರ್ಯ ತುಂಬಿದ ಸಹೋದರ ರಾಹುಲ್
ಈ ಕುರಿತಂತೆ ಪೊಲೀಸರು, ಮಹಿಳೆ ಉತ್ತರ ಪ್ರದೇಶದ ಸಂಭಾಲ್ ಮೂಲದವರಾಗಿದ್ದು, ಕೆಲವು ಕೆಲಸಕ್ಕಾಗಿ ದೆಹಲಿಗೆ ಬಂದಿದ್ದರು. ಆದರೆ ಆರೋಪಿಗಳು ಮಹಿಳೆಯನ್ನು ಐಟಿಒ-ಯಮುನಾ ಸೇತುವೆ ಬಳಿ ರೂಮ್‍ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಂತರ ಕಾಶ್ಮೀರ ಗೇಟ್ ಬಳಿ ಬಿಟ್ಟು ಹೋಗಿದ್ದಾರೆ ಅಂತ ಮಹಿಳೆ ಆರೋಪಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ- ಕೈ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಆಟೋ ಚಾಲಕ ತನ್ನ ಒಬ್ಬ ಸ್ನೇಹಿತನಿಗೆ ಮಾತ್ರ ಕರೆ ಮಾಡಿರುವುದಾಗಿ ತಿಳಿಸಿದ್ದಾನೆ. ಆದರೆ ಮಹಿಳೆ ಇನ್ನೂ ಇಬ್ಬರು ವ್ಯಕ್ತಿಗಳಿದ್ದರು ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆ ನೀಡಿರುವ ದೂರಿನ ಅನ್ವಯ ಐಪಿ ಎಸ್ಟೇಟ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.