ಹುಬ್ಬಳ್ಳಿ: ಖಾಸಗಿ ವಾಹನಗಳ ನಿಷೇಧ ಇರುವ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಆಟೋ ಹರಿಸಿದ ಘಟನೆ ಹುಬ್ಬಳ್ಳಿಯ ಬಿಆರ್‍ಟಿಎಸ್ ರಸ್ತೆಯಲ್ಲಿ ನಡೆದಿದೆ.
ರಾಯಾಪೂರದ ಸಂಜೀವಿನಿ ಪಾರ್ಕ್ ಬಳಿ ಈ ಘಟನೆ ನಡೆದಿದೆ. ಬಿಆರ್ ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರ ನಿಷೇಧ ಇದ್ದರೂ ಆಟೋ ಚಾಲಕರು ದರ್ಪ ತೋರಿದ್ದಾರೆ. ನಿಷೇಧದ ನಡುವೆಯೂ ಎರಡು ಆಟೋಗಳು ಬಂದಿದೆ. ಆಟೋಗಳು ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಬ್ಯಾರಿಕೇಡ್ ಎಳೆದಿದ್ದಾರೆ.
ಬ್ಯಾರಿಕೇಡ್ ಎಳೆದ ನಂತರ ಸಿಬ್ಬಂದಿ ಬೇರೆ ಮಾರ್ಗದಲ್ಲಿ ಹೋಗುವಂತೆ ಸೂಚನೆ ನೀಡಿದ್ದಾರೆ. ಸೂಚನೆ ನೀಡಿದ್ದರೂ ಆಟೋ ಚಾಲಕರು ಏಕಾಏಕಿ ನುಗ್ಗಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಂತರ ಭದ್ರತಾ ಸಿಬ್ಬಂದಿ ಗೆ ಡಿಕ್ಕಿ ಹೊಡೆಸಿದ್ದಾರೆ.
ಆಟೋ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv