ಬೆಂಗಳೂರು: ಬಜೆಟ್‍ನಲ್ಲಿ (Budget) ಆಟೋ (Auto) ಚಾಲಕರನ್ನು ನಿರ್ಲಕ್ಷಿಸಲಾಗಿದೆ ಎಂದು ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಅಲ್ಲದೇ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈಡೇರಿಸುವಂತೆ ಆಗ್ರಹಿಸಿದೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ, ಒಡಿಶಾಗಳಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೈಕ್ ಟ್ಯಾಕ್ಸಿಗಳನ್ನು (Bike Taxi) ನಿಷೇಧಿಸಬೇಕು. ಇಲ್ಲದಿದ್ದರೆ ಸರ್ಕಾರಿ ಸಾರಿಗೆ ಹೊರತುಪಡಿಸಿ ಉಳಿದೆಲ್ಲ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಯಮುನಾ ನದಿಯ ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರಕ್ಕೆ ಕೇಜ್ರಿವಾಲ್ ಸೂಚನೆ
Advertisement
Advertisement
ಸರ್ಕಾರಕ್ಕೆ 7 ದಿನಗಳ ಡೆಡ್ ಲೈನ್ ನೀಡಿರುವ ಸಂಘಟನೆ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದೆ. ಇಲ್ಲವಾದಲ್ಲಿ ಜು.28 ರಿಂದ ಅನಿರ್ಧಿಷ್ಟವಾಧಿ ಹೋರಾಟ ನಡೆಸಲಾಗುತ್ತದೆ. ರಾಜ್ಯಾದ್ಯಂತ 3.20 ಲಕ್ಷ ಹಾಗೂ ಬೆಂಗಳೂರಲ್ಲಿ 2.10 ಲಕ್ಷ ಆಟೋಗಳಿವೆ ಎಲ್ಲಾ ಆಟೋ ಚಾಲಕರು ಕೂಡ ಅಂದು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಲ್ಲಿರುವ 21 ಆಟೋ ಸಂಘಟನೆಗಳು ಭಾಗಿಯಾಗಲಿವೆ. ಖಾಸಗಿ ಬಸ್ ಒಕ್ಕೂಟ, ಶಾಲಾ ವಾಹನಗಳ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಲಿವೆ ಎಂದಿದ್ದಾರೆ.
Advertisement
Advertisement
ಅಕ್ರಮ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಬೇಕು. ಶಕ್ತಿ ಯೋಜನೆಯಿಂದ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಆಟೋ ಚಾಲಕನಿಗೆ ಪ್ರತಿ ತಿಂಗಳು 10,000 ರೂ. ಪರಿಹಾರ ನೀಡಬೇಕು. ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಆಟೋ ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ರೂ. ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೋಗಳನ್ನು ರ‍್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೊಂದಣಿ ಮಾಡುವುದರನ್ನ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ಸಿನೊಳಗೆ ನುಗ್ಗಿ, ಪೊಲೀಸರ ಮೇಲೆ ಖಾರದ ಪುಡಿ ಎರಚಿ ಆರೋಪಿಗೆ ಗುಂಡಿಟ್ಟು ಹತ್ಯೆ!
Web Stories