ನವದೆಹಲಿ: ಪಾಕಿಸ್ತಾನದ (Pakistan) ಜೊತೆಗೆ ಭಾರತ ಕ್ರಿಕೆಟ್ (Cricket) ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಒತ್ತಾಯಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯನ್ನು (Pahalgam Terror Attack) ಖಂಡಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಭಾರತ ಎಲ್ಲಾ ರೀತಿಯ ಕ್ರಿಕೆಟ್ ಸಂಬಂಧವನ್ನು ಕಡಿದುಕೊಳ್ಳಬೇಕು. ಐಸಿಸಿ ಮತ್ತು ಏಷ್ಯನ್ ಟೂರ್ನಿಗಳಲ್ಲಿಯೂ ಆಡಬಾರದು ಎಂದು ಆಗ್ರಹಿಸಿದರು. ಇದನ್ನೂ ಓದಿ: ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ
ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದ್ದು, ಅದನ್ನು ಇನ್ನು ಮುಂದೆ ಸಹಿಸಬಾರದು. ಖಂಡಿತವಾಗಿಯೂ ಭಾರತ ಪಾಕಿಸ್ತಾನದ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧವನ್ನು ಕಡಿದುಕೊಳ್ಳಬೇಕು. ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುತ್ತಿರುವುದು ತಮಾಷೆಯಾಗಿ ಮಾರ್ಪಟ್ಟಿದೆ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: Uttar Pradesh| ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಮೂವರು ಕಾರ್ಮಿಕರು ದುರ್ಮರಣ