ರಾಯ್ಪುರ: ಶಾಲಾ ವಿದ್ಯಾರ್ಥಿಗಳನ್ನು (Students) ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾಗೆ (Auto Rickshaw) ಟ್ರಕ್ (Truck) ಒಂದು ಡಿಕ್ಕಿ ಹೊಡೆದ ಪರಿಣಾಮ 7 ವಿದ್ಯಾರ್ಥಿಗಳು ದುರ್ಮರಣ ಹೊಂದಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕೋರೆರ್ ಚಿಲ್ಹತಿ ಚೌಕ್‌ನಲ್ಲಿ ಭೀಕರ ಅಪಘಾತ (Accident) ನಡೆದಿದೆ. ಗುರುವಾರ ಮಧ್ಯಾಹ್ನ ಆಟೋ ಚಾಲಕನೊಬ್ಬ 8 ಮಕ್ಕಳನ್ನು ತಮ್ಮ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಟ್ರಕ್ ಹೊಡೆತಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ನಮಾಜ್ ಮಾಡಲು ಮಸೀದಿ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಇದೆ – ಸುಪ್ರೀಂಗೆ ಮುಸ್ಲಿಂ ಬೋರ್ಡ್ ಮಾಹಿತಿ
Advertisement
Advertisement
ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆಗಾಗಲೇ 5 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಮೂವರು ಮಕ್ಕಳು ಹಾಗೂ ಆಟೋ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಹಾಗೂ ಇನ್ನೊಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನೆ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಳಿಗೆ ಎಲ್ಲಾ ರೀತಿಯ ಸಹಾಯವನ್ನು ಮಾಡಲು ಇಲಾಖೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿದ್ದ ಮಗು ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ – 11.10 ಲಕ್ಷ ದಂಡ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k