ಹಾಸನ: ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ.
ಕುಣಿಗಲ್ ಜನತಾ ಹೌಸ್ ನಿವಾಸಿ ಪ್ರದೀಪ್ (22) ಮೃತಪಟ್ಟಿರುವ ದುರ್ದೈವಿ. ಇವರು ಹಿರೀಸಾವೆ ಗ್ರಾಮದಿಂದ ಬ್ಯಾಡರಹಳ್ಳಿಗೆ ಹಿಂದಿರುಗುತ್ತಿದ್ದರು. ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ಸಂಧರ್ಭದಲ್ಲಿ ಸುಮಾರು ಮುಂಜಾನೆ 5.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಹಿರೀಸಾವೆ ಸಮೀಪದಲ್ಲಿ ತುಂಬಾ ಮಂಜು ಇದ್ದ ಕಾರಣ ದಾರಿ ಕಾಣದೆ ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಪ್ರದೀಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹಿರಿಸಾವೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯಕ್ಕೆ ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.