ರಾಯಚೂರು: ನಗರದ ಗೋಶಾಲೆ ರಸ್ತೆಯಲ್ಲಿರುವ ಜನತಾ ಆಟೋಮೊಬೈಲ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಬೀದರ್ನಲ್ಲಿ ಖಾಸಗಿ ಅಂಬುಲೆನ್ಸ್ಗಳದ್ದೇ ಕಾರ್ಬಾರ್ – ಬ್ರಿಮ್ಸ್ ಆಸ್ಪತ್ರೆ ಎದುರೇ ಖಾಸಗಿ ಸುಲಿಗೆ
ವಿಕ್ರಮ ಸಿಂಗ್ರವರಿಗೆ ಸೇರಿದ ಆಟೋಮೊಬೈಲ್ಸ್ ಅಂಗಡಿ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅಂಗಡಿಯಲ್ಲಿನ 60 ರಿಂದ 70 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಇದನ್ನೂ ಓದಿ: ಸೋಲೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಹುಲ್ಲನ್ನು ಬಳಸಿ ಬಯೋ ಗ್ಯಾಸ್ ತಯಾರು – ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರಶಂಸೆ
ಅಗ್ನಿಶಾಮಕ ದಳದ ಎರಡು ವಾಹನಗಳನ್ನು ಸಂಪೂರ್ಣ ಬೆಂಕಿ ನಾಂದಿಸಲು ಬಳಸಲಾಗಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವುದರೊಳಗೆ ಎಲ್ಲೆಡೆ ಬೆಂಕಿ ಹರಡಿದ್ದರಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಇದನ್ನೂ ಓದಿ: ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಬಸ್ಗಾಗಿ ವಿದ್ಯಾರ್ಥಿಗಳ ಪರದಾಟ- ಡಿಸಿ ವಾಸ್ತವ್ಯ ಹೂಡಿದ್ರೂ ಬಗೆಹರಿಯದ ಸಮಸ್ಯೆ