ಡೆಹ್ರಾಡೂನ್: ಉತ್ತರಾಖಂಡದ (Uttarakhand) ದ್ರೌಪದಿ ಕಾ ದಂಡಾ-2 (Draupadi ka Danda) ಶಿಖರದಲ್ಲಿ ಇಂದು ಭಾರೀ ಹಿಮಪಾತ (Avalanche) ಸಂಭವಿಸಿದ್ದು, 20ಕ್ಕೂ ಹೆಚ್ಚು ಪರ್ವತಾರೋಹಿಗಳು (Mountaineers) ಹಿಮದಲ್ಲಿ ಸಿಲುಕಿರುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ತಿಳಿಸಿದ್ದಾರೆ.
ವರದಿಗಳ ಪ್ರಕಾರ ನಾಪತ್ತೆಯಾದವರು ಉತ್ತರ ಕಾಶಿಯ ನೆಹರೂ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನವರಾಗಿದ್ದಾರೆ. ಟ್ರೆಕ್ಕಿಂಗ್ ತೆರಳಿದ್ದ 40 ಜನರ ಗುಂಪಿನಲ್ಲಿ 22 ವಿದ್ಯಾರ್ಥಿಗಳು ಹಾಗೂ 7 ಮಂದಿ ಬೋಧಕರಿದ್ದರು.
Advertisement
Advertisement
ಹಿಮಪಾತ ಸಂಭವಿಸಿದಾಗ 29 ಮಂದಿ ಸಿಲುಕಿಕೊಂಡಿದ್ದರು. ಅವರಲ್ಲಿ 8 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರ ಪತ್ತೆಗೆ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಜಿಲ್ಲಾಡಳಿತ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ
Advertisement
ಸೇನೆಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಧಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತ ಮೂಲದ 8 ತಿಂಗಳ ಮಗು ಸೇರಿ ನಾಲ್ವರು ಕಿಡ್ನ್ಯಾಪ್