ಟೋಕಿಯೋ: ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಒಂದೇ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
Advertisement
ಈ ಮೊದಲು ಅವನಿ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದೀಗ 50 ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡು, ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್
Advertisement
And the shot that mattered! The Shot that got #BRONZE for Avani Lekhara ????
Making #IND proud for the second time at #Tokyo2020 #Paralympics
— Doordarshan Sports (@ddsportschannel) September 3, 2021
Advertisement
ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್
Advertisement
More glory at the Tokyo #Paralympics. Elated by the stupendous performance of @AvaniLekhara. Congratulations to her on bringing home the Bronze medal. Wishing her the very best for her future endeavours. #Praise4Para
— Narendra Modi (@narendramodi) September 3, 2021
ಪ್ರಧಾನಿ ಅಭಿನಂದನೆ
ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಮತ್ತು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಪ್ಯಾರಾಲಿಂಪಿಕ್ಸ್ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಬಗ್ಗೆ ಹೆಮ್ಮೆ ಪಡುತ್ತೇನೆ. ಈ ಪದಕವು ಅವರ ಕಠಿಣ ಪರಿಶ್ರಮ ಮತ್ತು ಸಾಟಿಯಿಲ್ಲದ ಸಮರ್ಪಣೆಯ ಫಲವಾಗಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ. ಇದನ್ನೂ ಓದಿ: ಜಾವೆಲಿನ್ ಎಸೆತ ಭಾರತಕ್ಕೆ ಅವಳಿ ಪದಕ