ಬೆಂಗಳೂರು: ನಗರದ ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ನಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಕುರಿತು ತನಿಖೆ ಚುರುಕುಗೊಂಡ ಬೆನ್ನಲ್ಲೆ, ಕ್ಲಬ್ ಸದಸ್ಯತ್ವಕ್ಕೆ ಉದ್ಯಮಿ ಅವಿನಾಶ್ ಅಮರ್ ಲಾಲ್ ರಾಜೀನಾಮೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೋರಿಂಗ್ ಕ್ಲಬ್ ಆಡಳಿತ ಮಂಡಳಿ ಅವೀನಾಶ್‍ಗೆ ಶೋಕಾಸ್ ನೋಟಿಸ್ ನೀಡಿದ್ದು, ಇದಕ್ಕೆ ಸಭೆಯಲ್ಲಿ ಉತ್ತರ ನೀಡುವಂತೆ ತಾಕೀತು ಮಾಡಿತ್ತು. ಆದರೆ ಸಭೆಗೂ ಮುನ್ನವೇ ಮಂಗಳವಾರ ಮಧ್ಯಾಹ್ನ ಕ್ಲಬ್‍ಗೆ ಬಂದ ಅವಿನಾಶ್ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಮರಳಿದ್ದಾರೆ.
Advertisement
ಅವೀನಾಶ್ ವರ್ತನೆಯಿಂದ ಆಡಳಿತ ಮಂಡಳಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಕ್ಲಬ್ ಮೂಲಗಳು ತಿಳಿಸಿವೆ.
Advertisement
ಸಿಕ್ಕಿಬಿದ್ದಿದ್ದು ಹೇಗೆ?
ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ 15 ದಿನಗಳ ಹಿಂದೆ ಅವಿನಾಶ್ ಅಮರ್ ಲಾಲ್‍ಗೆ ಲಾಕರ್ ನಲ್ಲಿ ಇಟ್ಟಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಹೋಗಿ ಒಂದು ವೇಳೆ ಲಾಕರ್ ನಲ್ಲಿರುವ ವಸ್ತು ಕೊಂಡೊಯ್ಯದಿದ್ದರೆ ಲಾಕರ್ ಒಡೆಯುದಾಗಿ ನೋಟಿಸ್ ಕಳುಹಿಸಿದ್ದರು. ಸ್ವಲ್ಪ ಕೆಲಸ ಕಾರ್ಯಗಳಿವೆ. ಆದ್ದರಿಂದ ಅವುಗಳನ್ನು ಒಡೆದು ನವೀಕರಣಗೊಳಿಸಬೇಕಿದೆ ಎಂದು ಬೌರಿಂಗ್ ಆಡಳಿತ ಮಂಡಳಿ ನೋಟಿಸ್ ನಲ್ಲಿ ತಿಳಿಸಿತ್ತು. ಆದರೆ ಉದ್ಯಮಿ ನೋಟಿಸ್ ಬಗ್ಗೆ ತಲೆ ತಲೆಕೆಡಿಸಿಕೊಂಡಿಲ್ಲ. ಕೊನೆಗೆ ಆಡಳಿತ ಮಂಡಳಿ 86, 87ರಲ್ಲಿ ಲಾಕರ್ ಹೊಡೆದಿದೆ. ಆಗ ಈ ಕೋಟಿ ಕೋಟಿ ಆಸ್ತಿ ಪತ್ತೆಯಾಗಿತ್ತು.
Advertisement
ರಾಜಸ್ಥಾನ ಮೂಲದ ಅವಿನಾಶ್ ಅಮರ್ ಲಾಲ್ ಪ್ರೆಸ್ಟಿಜ್ ಗ್ರೂಪ್ ಆಫ್ ಕಂಪೆನಿಯಲ್ಲಿ ಪಾಲುದಾರನಾಗಿದ್ದು, ಬೆಂಗಳೂರಲ್ಲಿ 30% ರಷ್ಟು ಬಡ್ಡಿಗೆ ಸಾಲ ನೀಡುತ್ತಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
Advertisement
ಉದ್ಯಮಿ ಅವಿನಾಶ್ ಅಮರ್ ಲಾಲ್, ನಗರದ ಟೆನಿಸ್ ಕೋರ್ಟ್ ನಲ್ಲಿ ಕಳೆದ 1 ವರ್ಷದಿಂದ ನಿಧಿಯನ್ನು ಬಚ್ಚಿಟ್ಟಿದ್ದರು. ಬೌರಿಂಗ್ ಇನ್ಸ್ಟಿಟ್ಯೂಟ್ ಆಡಳಿತ ಮಂಡಳಿ ಅವರು ಬಚ್ಚಿಟ್ಟಿದ್ದ ಲಾಕರ್ ಓಪನ್ ಮಾಡಿದ್ದಾರೆ. 2 ಲಾಕರ್ ಓಪನ್ ಮಾಡಿದ್ದು, ಅದರಲ್ಲಿ 2 ಬ್ಯಾಗ್ ಪತ್ತೆಯಾಗಿತ್ತು. ಈ 2 ಬ್ಯಾಗಿನಲ್ಲಿ ಸುಮಾರು 3.90 ಕೋಟಿ ನಗದು, 5 ಕೋಟಿ ಮೌಲ್ಯದ ವಜ್ರಾಭರಣ ಮತ್ತು 100 ಕೋಟಿ ರೂ. ಆಸ್ತಿ ಪತ್ರ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.