ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಹೀಗಾಗಿ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇಂದ್ರ ಸಲಹೆ ನೀಡಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ – ಅಂಚೆ ಇಲಾಖೆಯಿಂದ 10 ದಿನಗಳಲ್ಲಿ 1 ಕೋಟಿ ಧ್ವಜ ಮಾರಾಟ
Advertisement
Advertisement
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕೈಗೊಳ್ಳಿ. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.
Advertisement
ಭಾರತದಲ್ಲಿ 16,561 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,42,23,557 ಕ್ಕೆ ತಲುಪಿದೆ. ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ
Advertisement
ಸ್ವಾತಂತ್ರ್ಯ ದಿನಾಚರಣೆಯಂದು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸಲು ಗಿಡ ನೆಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಿ ಇಲಾಖೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಗೃಹ ಸಚಿವಾಲಯವು ಸಲಹೆ ನೀಡಿದೆ.