ನವದೆಹಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಅವರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ. ಮೃತರ ಘನತೆಯನ್ನು ಕಾಪಾಡುವಂತೆ ಭಾರತೀಯ ವಾಯುಸೇನೆ ಮನವಿ ಮಾಡಿದೆ.
Advertisement
IAF has constituted a tri-service Court of Inquiry to investigate the cause of the tragic helicopter accident on 08 Dec 21. The inquiry would be completed expeditiously & facts brought out. Till then, to respect the dignity of the deceased, uninformed speculation may be avoided.
— Indian Air Force (@IAF_MCC) December 10, 2021
Advertisement
ಟ್ವೀಟ್ನಲ್ಲಿ ಏನಿದೆ?: ಡಿಸೆಂಬರ್ 8ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ದುರಂತಕ್ಕೆ ಕಾರಣವಾದ ಸತ್ಯವನ್ನೂ ಹೊರತರಲಾಗುತ್ತದೆ. ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು ಎಂದು ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಿದೆ. ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ
Advertisement
Advertisement
ತಮಿಳುನಾಡಿನ ಕೂನೂರು ಸಮೀಪ ಬುಧವಾರ ಸೇನಾ ಹೆಲಿಕಾಪ್ಟರ್ ಪತನಗೊಂಡ ಪ್ರಕರಣದ ತನಿಖೆಯನ್ನು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ನಡೆಸಲಿದೆ. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ ವೀಡಿಯೋ ಅಸಲಿಯತ್ತಿನ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ