ನವದೆಹಲಿ: ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಸಚಿವರಿಗೆ ಸೂಚಿಸಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಮರುದಿನವಾದ ಸೋಮವಾರ ಮೋದಿ ಅವರು ತನ್ನ ಸಂಪುಟದ ಸದಸ್ಯರ ಮೊದಲ ಸಭೆ ನಡೆಸಿದರು.
ಈ ವೇಳೆ, ಯಾವುದೇ ಅನಗತ್ಯ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಡಿ. ಅಗತ್ಯವಿರುವಾಗ ಆಯಾ ಸಚಿವಾಲಯಗಳಿಗೆ ನೇರವಾಗಿ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತ್ರ ಮಾತನಾಡಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀವನದ ಅತಿದೊಡ್ಡ ಸವಾಲು, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೆಲಸ ಮಾಡ್ತೀನಿ: ಹೆಚ್‌ಡಿಕೆ
ಮಂತ್ರಿಗಳು ಸರಿಯಾಗಿ ಸಮಯಪಾಲನೆ ಮಾಡಬೇಕು. ಇದರಿಂದ ಸಚಿವಾಲಯದ ಸಿಬ್ಬಂದಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸಿದಂತಾಗುತ್ತದೆ. ಸಚಿವಾಲಯದ ನಿರ್ಧಾರಗಳನ್ನು, ಸಂಬಂಧಿಸಿದ ಕಡತಗಳನ್ನು ರಾಜ್ಯ ಮಂತ್ರಿ ಜೊತೆ ಹಂಚಿಕೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಸಚಿವ ಸಂಪುಟ ಸಭೆ ಮುಗಿದ ಕೂಡಲೇ ಖಾತೆಗಳನ್ನು ಪ್ರಕಟಿಸಲಾಗಿದೆ. ಪ್ರಮುಖ 5 ಸಚಿವಾಲಯಗಳನ್ನು ಬಿಜೆಪಿ ತನ್ನ ಬಳಿಯೇ ಇಟ್ಟುಕೊಂಡಿದೆ ಮತ್ತು ಈ ಹಿಂದೆ ನಿರ್ವಹಣೆ ಮಾಡಿದವರಿಗೆ ನೀಡಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿರೋ ಹೇಮಂತ್ ಸೊರೆನ್ ಪತ್ನಿ ಜಾರ್ಖಂಡ್ MLA ಆಗಿ ಪ್ರಮಾಣವಚನ ಸ್ವೀಕಾರ!
ಅಮಿತ್ ಶಾ ಅವರಿಗೆ ಗೃಹ ಖಾತೆ, ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿ ಮುಂದುವರೆದಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು, ಎಸ್ ಜೈಶಂಕರ್ ವಿದೇಶಾಂಗ, ನಿತಿನ್ ಗಡ್ಕರಿ ಅವರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆಯನ್ನು ನೀಡಲಾಗಿದೆ.