ಮಂಗಳೂರು: ಮದುವೆಯಾದ 2ನೇ ದಿನಗಳಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ನವವಿವಾಹಿತೆ (Newly Married Women) ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.
ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತ ನವವಿವಾಹಿತೆ. ಗಂಭೀರವಾಗಿ ಗಾಯಗೊಂಡಿರುವ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ‘ಹನುಮಾನ್’ ನಿರ್ದೇಶಕನ ಹೊಸ ಸಿನಿಮಾ: ಚಿತ್ರರಂಗಕ್ಕೆ ಬಾಲಯ್ಯ ಪುತ್ರನ ಗ್ರ್ಯಾಂಡ್ ಎಂಟ್ರಿ
ನವದಂಪತಿ ಬಿ.ಸಿ ರಸ್ತೆ ಕಡೆಯಿಂದ ಮಂಗಳೂರು (Mangaluru) ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು, ಡಿವೈಡರ್‌ನಿಂದಾಚೆಗೆ ಹಾರಿ, ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿವಿಸಿದ ಬಳಿಕ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಅನಿಶ್ ಕೃಷ್ಣ – ಮಾನಸ ದಂಪತಿ ಕಳೆದ ಎರಡು ದಿನಗಳ ಹಿಂದಷ್ಟೇ ಅಂದ್ರೆ ಸೆಪ್ಟಂಬರ್ 5ರಂದು ದೇಂತಡ್ಕ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಸ್ ಮನೆಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ.
ದಂಪತಿಯಿಬ್ಬರೂ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!