ಶಿವಮೊಗ್ಗ: ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ಗುರುವಾರ ಬೆಂಗಳೂರಿನ (Bengaluru) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾನು ಮತ್ತು ನನ್ನ ಸ್ನೇಹಿತರು ಪಕ್ಷ ಸೇರ್ಪಡೆಯಾಗಲಿದ್ದೇವೆ. ಶಿಕಾರಿಪುರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ನಾಗರಾಜಗೌಡ ಅವರು ನಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾವೇರಿ ಸರ್ವಪಕ್ಷ ಸಭೆ – ನೀರು ಹಂಚಿಕೆಗೆ ಸಂಕಷ್ಟ ಸೂತ್ರಕ್ಕೆ ಸರ್ವರ ಒತ್ತಾಯ
ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಸೇರ್ಪಡೆಯ ಸಂದರ್ಭ ಎದುರಾಗಿತ್ತು. ಆಗ ಕಾರಣಾಂತರದಿಂದ ಜೆಡಿಎಸ್ (JDS) ಸೇರಬೇಕಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು. ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯ್ತಿ, ವಿಧಾನ ಪರಿಷತ್ ಚುನಾವಣೆಗೆ ನಾವೆಲ್ಲಾ ಶಕ್ತಿ ಮೀರಿ ಸಮಯ ವಿನಿಯೋಗ ಮಾಡುವ ನಿಲುವು ಹೊಂದಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಇಲ್ಲಿ ಅಣ್ಣ-ತಮ್ಮನ ಪ್ರಶ್ನೆ ಬರಲ್ಲ.. ರೈತರು, ನೀರಿನ ಪ್ರಶ್ನೆ: ಹೆಚ್‌ಡಿಕೆ
ಕಾಂಗ್ರೆಸ್ ಪಕ್ಷಕ್ಕೆ ಷರತ್ತು ರಹಿತವಾಗಿ ಸೇರಿದ್ದೇನೆ. ವಿಧಾನ ಪರಿಷತ್ ಚುನಾವಣೆಗೆ ಯಾರಿಗೆ ಟಿಕೆಟ್ ಕೊಟ್ಟರೂ ಗೆಲುವು ಮುಖ್ಯ. ಜೆಡಿಎಸ್ ಪಕ್ಷ ತೊರೆಯಲು ಯಾವುದೇ ಕಾರಣವಿಲ್ಲ. ಆ ಪಕ್ಷದ ಬಗ್ಗೆ ಯಾವುದೇ ಬೇಸರವಿಲ್ಲ. ಪ್ರೀತಿಯಿಂದ ನಡೆಸಿಕೊಂಡಿದ್ದಾರೆ. ಸ್ಥಳೀಯವಾಗಿ ಕೆಲವು ಕಾರಣಗಳಿಂದಾಗಿ ಕಾಂಗ್ರೆಸ್ ಸೇರ್ಪಡೆ ಆಗಬೇಕಾಗಿದೆ. ರಾಜಕಾರಣವೇ ಒಂದು ಅವಕಾಶ. ಅವಕಾಶವಾದಿಯಲ್ಲದ ನಾಲ್ಕು ರಾಜಕಾರಣಿಗಳನ್ನು ತೋರಿಸಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ಯೋಜನೆಗಳಿಗೆ ನೂರಾರು ಕೋಟಿ ವ್ಯಯ – ಭಾರತಕ್ಕೇನು ಲಾಭ?
Web Stories