ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರದ (Ram Mandir) ಪ್ರಮುಖ ಮಾರ್ಗಗಳಾದ ಭಕ್ತಿಪಥ ಮತ್ತು ರಾಮಪಥದಲ್ಲಿ 50 ಲಕ್ಷ ಮೌಲ್ಯದ ದೀಪಗಳನ್ನು ಕಳ್ಳತನ ಮಾಡಲಾಗಿದೆ. ಸುಮಾರು 3,800 ಬಿದಿರಿನ ದೀಪಗಳು ಮತ್ತು 36 ಗೋಬೋ ಪ್ರೊಜೆಕ್ಟರ್‌ಗಳು ಕಾಣೆಯಾಗಿವೆ.
ಖಾಸಗಿ ಸಂಸ್ಥೆಗಳಾದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣಾ ಆಟೋಮೊಬೈಲ್ಸ್ ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿಪಥದಲ್ಲಿ 96 ಗೋಬೋ ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಿವೆ. ಭಕ್ತಿ ಪಥವು ಅಯೋಧ್ಯೆಯ ರಾಮಮಂದಿರಕ್ಕೆ ಹೋಗುವ ಮುಖ್ಯ ರಸ್ತೆಯಾಗಿದ್ದು, ಶೃಂಗಾರ್ ಘಾಟ್ ಅನ್ನು ಹನುಮಾನ್ ಗರ್ಹಿ ಮತ್ತು ಅಂತಿಮವಾಗಿ ದೇವಸ್ಥಾನಕ್ಕೆ ಸಂಪರ್ಕಿಸುತ್ತದೆ. ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ
Advertisement
Advertisement
ಅಯೋಧ್ಯೆಯ ಮತ್ತೊಂದು ಪ್ರಮುಖ ಮಾರ್ಗವಾದ ರಾಮಪಥ, 13 ಕಿಮೀ ಉದ್ದದ ಹೆದ್ದಾರಿಯಾಗಿದ್ದು, ಅದು ಸದಾತ್‌ಗಂಜ್ ಅನ್ನು ನಯಾ ಘಾಟ್‌ಗೆ ಸಂಪರ್ಕಿಸುತ್ತದೆ. ಪ್ರಯಾಣಿಕರು ನೇರವಾಗಿ ರಾಮಮಂದಿರಕ್ಕೆ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ.
Advertisement
ಖಾಸಗಿ ಸಂಸ್ಥೆಗಳು ಅಯೋಧ್ಯೆಯ ಅತ್ಯಂತ ಭದ್ರತಾ ಪ್ರದೇಶದಲ್ಲಿರುವ ಭಕ್ತಿಪಥ ಮತ್ತು ರಾಮಪಥದಲ್ಲಿ ಅಳವಡಿಸಲಾದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ 3,800 ಬಿದಿರು ಮತ್ತು 36 ಪ್ರೊಜೆಕ್ಟರ್ ಲೈಟ್‌ಗಳನ್ನು ಸ್ಥಾಪಿಸಲಾಗಿದ್ದು, ಕಳ್ಳತನವಾಗಿದೆ ಎಂದು ಆ.9 ರಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಸಿಡಿಲಿನ ದಾಳಿ ಎದುರಿಸಲು ತಾಳೆ ಮರಗಳನ್ನು ನೆಡಲು ಮುಂದಾದ ಒಡಿಶಾ – ಏನಿದರ ವಿಶೇಷ?
Advertisement
ಮಾರ್ಗಗಳಲ್ಲಿ ದೀಪಗಳನ್ನು ಅಳವಡಿಸಿದ ಸಂಸ್ಥೆಗಳ ಪ್ರತಿನಿಧಿ, ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಮಾರ್ಗಗಳಲ್ಲಿ ದೀಪಗಳನ್ನು ಅಳವಡಿಸುವ ಗುತ್ತಿಗೆಯನ್ನು ಇಬ್ಬರಿಗೆ ನೀಡಲಾಯಿತು.