ಲಕ್ನೋ: ಪ್ರವಾಸಿಗರ ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಅಯೋಧ್ಯೆ (Ayodhya) ರಾಮಮಂದಿರ (Ram Mandir) ಹೊರಹೊಮ್ಮಿದೆ. ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ತಾಣಗಳಲ್ಲಿ ಅಗ್ರ ಸ್ಥಾನದಲ್ಲಿದ್ದ ತಾಜ್ ಮಹಲ್‌ನ್ನು (Taj Mahal) ಹಿಂದಿಕ್ಕಿ ರಾಮಮಂದಿರ ನಂ.1 ಪಟ್ಟಕ್ಕೇರಿದೆ.
ಉತ್ತರ ಪ್ರದೇಶಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ಹೊಸ ದಾಖಲೆಯನ್ನು ಬರೆದಿದೆ. 2024ರ ಜನವರಿ-ಸೆಪ್ಟೆಂಬರ್ ನಡುವೆ 47.61 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಇವರ ಪೈಕಿ ಅಯೋಧ್ಯೆಗೆ 13.55 ಮಂದಿ ಪ್ರವಾಸ ಮಾಡಿದ್ದಾರೆ. ಅಲ್ಲದೇ, 3,153 ವಿದೇಶಿ ಪ್ರವಾಸಿಗರೂ ರಾಮಮಂದಿರ ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಅಕಸ್ಮಾತ್ ಹುಂಡಿಗೆ ಬಿದ್ದ ಐಫೋನ್ ದೇವಸ್ಥಾನದ ಪಾಲು – ವಾಪಸ್ ಕೊಡಲ್ಲ ಎಂದ ಮಂಡಳಿ
ಇದೇ ಅವಧಿಯಲ್ಲಿ ಆಗ್ರಾದಲ್ಲಿ ತಾಜ್‌ಮಹಲ್‌ಗೆ 12.51 ಕೋಟಿ ಜನರು ಭೇಟಿ ನೀಡಿದ್ದಾರೆ. 11.59 ಕೋಟಿ ಮಂದಿ ದೇಶೀಯ ಮತ್ತು 9,24,000 ಅಂತರರಾಷ್ಟ್ರೀಯ ಪ್ರವಾಸಿಗರು ವಿಸಿಟ್ ಮಾಡಿದ್ದಾರೆ.
ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಅವರು, ರಾಜ್ಯದ ಗಮನಾರ್ಹ ಸಾಧನೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶವು ಕಳೆದ ವರ್ಷ 48 ಮಿಲಿಯನ್ ಪ್ರವಾಸಿಗರನ್ನು ಸ್ವಾಗತಿಸಿದೆ. ಈ ವರ್ಷ ಕೇವಲ ಒಂಬತ್ತು ತಿಂಗಳಲ್ಲಿ ಈ ಮೈಲುಗಲ್ಲು ತಲುಪಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಪ್ ಕಾರ್ನ್ ಮೇಲೆ 3 ರೀತಿಯ ಜಿಎಸ್‌ಟಿ – ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ; ಯಾವುದು ದುಬಾರಿ?
ಲಕ್ನೋ ಮೂಲದ ಹಿರಿಯ ಟ್ರಾವೆಲ್ ಪ್ಲಾನರ್ ಮೋಹನ್ ಶರ್ಮಾ, ಅಯೋಧ್ಯೆಯನ್ನು ಭಾರತದಲ್ಲಿನ ಆಧ್ಯಾತ್ಮಿಕ ಪ್ರವಾಸೋದ್ಯಮದ ಕೇಂದ್ರಬಿಂದು ಎಂದು ಬಣ್ಣಿಸಿದ್ದಾರೆ. ಧಾರ್ಮಿಕ ಪ್ರವಾಸಗಳಿಗಾಗಿ ಬುಕಿಂಗ್‌ನಲ್ಲಿ ಶೇ.70 ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.