ಅಯೋಧ್ಯೆ: ರಾಮ ಮಂದಿರದಲ್ಲಿ (Ram Mandir) ರಾಮ ಪ್ರಾಣ ಪ್ರತಿಷ್ಠೆ ನಡೆಯುವ ಮೊದಲು ಅಯೋಧ್ಯೆಯ (Ayodhya) ಸರಯೂ ನದಿ ದಂಡೆಯಲ್ಲಿ 1008 ಶಿವಲಿಂಗಗಳನ್ನು ಸ್ಥಾಪಿಸುವ ಭವ್ಯವಾದ ರಾಮನಾಮ ಮಹಾ ಯಜ್ಞ (Ram Naam Maha Yagya) ಜನವರಿ 14 ರಿಂದ ಜನವರಿ 25 ರವರೆಗೆ ನಡೆಯಲಿದೆ.
ಈ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ನೇಪಾಳದಿಂದ 21,000 ಯತಿಗಳು ಆಗಮಿಸಲಿದ್ದಾರೆ. ಮಹಾಯಾಗವನ್ನು ನಡೆಸಿ, ಅದರಲ್ಲಿ ಶಿವಲಿಂಗಗಳನ್ನು (Shiva Linga) ಇರಿಸಲು ಈಗಾಗಲೇ 1008 ಯಜ್ಞ ಮಂಟಪವನ್ನು ನಿರ್ಮಿಸಲಾಗಿದೆ. ಈ ಪೈಕಿ ದೊಡ್ಡ ಯಾಗ ಶಾಲೆಯ ಛಾವಣಿ 11 ಪದರಗಳನ್ನು ಹೊಂದಿರುವುದು ವಿಶೇಷ. ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದ ವಿಶೇಷ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ: ರಾಮ ಮಂದಿರ
Advertisement
Advertisement
ರಾಮಮಂದಿರದಿಂದ 2 ಕಿ.ಮೀ ದೂರದಲ್ಲಿರುವ ಸರಯೂ ನದಿಯ (Sarayu River) ಮರಳು ಘಾಟ್‌ನಲ್ಲಿರುವ 100 ಎಕರೆ ಪ್ರದೇಶದಲ್ಲಿ ಈ ಯಜ್ಞ ಮಂಟಪಗಳನ್ನು ಸ್ಥಾಪಿಸಲಾಗಿದೆ.
Advertisement
ಅಯೋಧ್ಯೆ ಮೂಲದ ಈಗ ನೇಪಾಳದಲ್ಲಿ (Nepal) ನೆಲೆಸಿರುವ ಆತ್ಮಾನಂದ ದಾಸ್ ಮಹಾತ್ಯಾಗಿ(ನೇಪಾಳಿ ಬಾಬಾ) ಅವರು ಈ ಯಾಗವನ್ನು ಆಯೋಜಿಸಿದ್ದಾರೆ. ಪ್ರತಿ ವರ್ಷದ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ನಾನು ಈ ಯಾಗವನ್ನು ಮಾಡುತ್ತೇನೆ. ಆದರೆ ಈ ವರ್ಷ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಯಜ್ಞ ಮಂಟಪಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: 8 ಕೆಜಿ ಬೆಳ್ಳಿ ಪಾದುಕೆ ಹೊತ್ತು 7,200 KM ಪಾದಯಾತ್ರೆ – 64ರ ವೃದ್ಧನ ಭಕ್ತಿಗೆ ರಾಮನ ಭಕ್ತರಿಂದ ಮೆಚ್ಚುಗೆ
Advertisement
ಈ ಯಾಗದಲ್ಲಿ ಪ್ರತಿದಿನ 50 ಸಾವಿರ ಭಕ್ತರಿಗೆ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದ್ದು, ದಿನಕ್ಕೆ ಸುಮಾರು 1 ಲಕ್ಷ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಮಹಾ ಯಾಗ ಮುಗಿದ ನಂತರ 1008 ಶಿವಲಿಂಗಗಳನ್ನು ಸರಯೂ ನದಿಯಲ್ಲಿ ವಿಸರ್ಜಿಸಲಾಗುತ್ತದೆ.
ಜನವರಿ 17 ರಿಂದ 24,000 ರಾಮಾಯಣದ ಶ್ಲೋಕಗಳ ಪಠಿಸಲಾಗುತ್ತದೆ. ಪ್ರತಿದಿನ 1008 ಶಿವಲಿಂಗಗಳಿಗೆ ಅಭಿಷೇಕ ನಡೆಯಲಿದೆ. ಶಿವಲಿಂಗಗಳ ಕೆತ್ತನೆಗಾಗಿ ಮಧ್ಯಪ್ರದೇಶದ ನರ್ಮದಾ ನದಿಯಿಂದ ಕಲ್ಲುಗಳನ್ನು ತರಲಾಗಿದೆ ಎಂದು ನೇಪಾಳಿ ಬಾಬಾ ಹೇಳಿದರು. ಇದನ್ನೂ ಓದಿ: ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?