ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್‌ಡಿಕೆ

Public TV
1 Min Read
KUMARASWAMY

ಅಯೋಧ್ಯೆ: ಇಂದು ರಾಮನೂರು ಅಯೋಧ್ಯೆಯಲ್ಲಿ (Ayodhya Ram Mandir) ರಾಮಲಲ್ಲಾನ ಪ್ರಾಣಪತ್ರಿಷ್ಠಾ ಕಾರ್ಯಕ್ರಮ (Pran Prathistha ceremony) ನಡೆಯಲಿದ್ದು, ಈ ಕ್ಷಣಕ್ಕಾಗಿ ದೇಶ-ವಿದೇಶದ ಜನ ಕಾಯುತ್ತಿದ್ದಾರೆ. ಅಂತೆಯೇ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ (HD Devegowda) ಕುಟುಂಬ ಈಗಾಗಲೇ ಅಯೋಧ್ಯೆಗೆ ತೆರಳಿದೆ. ಈ ಸುಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy), ಮೊದಲು ಜೈ ಶ್ರೀರಾಮ್ ಎಂದಿದ್ದಾರೆ. ಬಳಿಕ ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿ ಮೋದಿಯವರ (Narendra Modi) ನೇತೃತ್ವದಲ್ಲಿ ಇಂದು ನೆರವೇರುತ್ತಿದೆ ಎಂದು ತಿಳಿಸಿದ್ದಾರೆ.

ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ. ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ 500 ವರ್ಷಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಗತವೈಭವ ಮರುಕಳಿಸಿದ್ದು, ದೇಶಾದ್ಯಂತ ರಾಮನ ಸಂಭ್ರಮವನ್ನು ಆಚರಿಸಲಾಗುತ್ತದೆ.

Share This Article