ಬೆಂಗಳೂರು: ನಾವು ಶ್ರೀರಾಮಚಂದ್ರನ (Sri Ramachandra) ವಿರುದ್ಧ ಇಲ್ಲ. ಬಿಜೆಪಿ (BJP) ಅವರು ರಾಮ ಮಂದಿರವನ್ನು ರಾಜಕೀಯ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ಖಂಡಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನ ಭಕ್ತರು, ನಾವು ಶ್ರೀರಾಮಚಂದ್ರನ ಪೂಜೆ ಮಾಡುತ್ತೇವೆ. ಕೇದ್ರ ಸಚಿವರುಗಳು ರಾಜಕೀಯ ಮಾತನಾಡುತ್ತಿದ್ದಾರೆ ಅಷ್ಟೇ. ರಾಜಕೀಯ ಮಾತನಾಡೋರಿಗೆ ಔಷಧವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ
ನಾವು ಶ್ರೀರಾಮಚಂದ್ರನ ವಿರುದ್ಧವಿಲ್ಲ. ಶ್ರೀರಾಮಚಂದ್ರನನ್ನ ನಾವು ಗೌರವಿಸುತ್ತೇವೆ, ಪೂಜೆ ಮಾಡುತ್ತೇವೆ. ಭಜನೆ ಮಾಡುತ್ತೇವೆ. ರಾಮಮಂದಿರಕ್ಕೆ ನಮ್ಮದು ವಿರೋಧವಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಯಡಿಯೂರಪ್ಪನವರು ಆರೋಪಕ್ಕೆ ಕಿಡಿಕಾರಿದ ಅವರು, ಈಗ ಯಾಕೆ ಇವರು ಅಯೋಧ್ಯೆಗೆ ಹೋಗುತ್ತಿದ್ದಾರೆ. ಶ್ರೀರಾಮಚಂದ್ರ ಇಲ್ಲಿ ಇಲ್ವಾ? ಇಲ್ಲೂ ಎಲ್ಲಾ ಪೂಜೆ ಮಾಡುತ್ತಿದ್ದಾರೆ. ಅಷ್ಟೇ ಎಂದು ಸಿಎಂ ತಿರುಗೇಟು ಕೊಟ್ಟರು.
ರಾಜ್ಯ ಸರ್ಕಾರದಿಂದ 22 ರಂದು ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲು ಆದೇಶ ಮಾಡಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದರು. ಮುಜರಾಯಿ ಇಲಾಖೆಯ ಆದೇಶವೇ ಗೊತ್ತಿಲ್ಲ, ಆ ಹೇಳಿಕೆ ನಾನು ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ಅಯೋಧ್ಯೆ ರಾಮ ಮಂದಿರಕ್ಕೆ ಸಂಬಂಧಿಸಿದ ವಿಶೇಷ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ: ರಾಮ ಮಂದಿರ