ಅಯೋಧ್ಯೆ: ಇಲ್ಲಿನ ರಾಮ ಮಂದಿರ ದೇಣಿಗೆ (Ram Mandir Donation) ಕದ್ದವರ ಪರ ವಕೀಲರು ವಕಾಲತ್ತು ವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಯಾರಾದರೂ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಿದರೆ ಅವರಿಗೆ 5 ಲಕ್ಷ ರೂ. ದಂಡ ವಿಧಿಸುವುದಾಗಿ ಅಯೋಧ್ಯೆ ಬಾರ್ ಅಸೋಸಿಯೇಷನ್ (Ayodhya Bar Association) ಖಡಕ್ ಎಚ್ಚರಿಕೆ ನೀಡಿದೆ.
ಅಯೋಧ್ಯೆ ಬಾರ್ ಅಸೋಸಿಯೇಷನ್ ಅಧ್ಯಕ್ಷ ಕಾಳಿಕಾ ಪ್ರಸಾದ್ ಮಿಶ್ರಾ ಅವರ ನೇತೃತ್ವದಲ್ಲಿ ನಡೆದ ಫೈಜಾಬಾದ್ ವಕೀಲರ ಸಂಘದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಯಾವ ವಕೀಲರು ವಕಾಲತ್ತು ವಹಿಸುವುದಿಲ್ಲ. ಯಾರಾದರೂ ವಕಾಲತ್ತು ವಹಿಸಿದರೆ ಅವರಿಗೆ 5 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಕಾಳಿಕಾ ಪ್ರಸಾದ್ ಘೋಷಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ | ಏನ್ ಅಂಥಾ ಅರ್ಜೆಂಟು? – ತುರ್ತು ವಿಚಾರಣೆಗೆ ಸುಪ್ರೀಂ ನಕಾರ
🚨 BIG BREAKING
Ayodhya Bar Association announces that NO lawyer will represent the accused in the alleged Ram Mandir donation embezzlement case.
President Kalika Prasad Mishra said that any lawyer who does so will face a fine of ₹5 lakh. pic.twitter.com/mGAClhMaur
— Megh Updates 🚨™ (@MeghUpdates) June 29, 2026
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಯೋಧ್ಯಾ ಪೊಲೀಸರು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆಯನ್ನು ದಾಖಲಿಸಿದ್ದಾರೆ. ಇದರ ಜೊತೆಗೆ ಅನೀಲ್ ಮಿಶ್ರಾ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಈ ನಡುವೆ ಇಬ್ಬರನ್ನೂ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಇಬ್ಬರ ಮೇಲೆ ಪೊಲೀಸರ ಅನುಮಾನ ಹೆಚ್ಚಾಗುತ್ತಿದೆ.
ಪ್ರಾಥಮಿಕ ಹಂತದಲ್ಲಿ ಹಲವು ಜನರನ್ನ ವಿಚಾರಣೆ ನಡೆಸಿರುವ ಎಸ್‌ಐಟಿ ಇನ್ನಷ್ಟು ಜನರನ್ನು ವಿಚಾರಣೆಗೆ ಒಳಪಡಿಸಬಹುದು. ಒಟ್ಟು 140 ಕ್ಕೂ ಅಧಿಕ ಜನರನ್ನು ವಿಚಾರಣೆಗೆ ಒಳಪಡಿಸಿ ಅಂತಿಮ ವರದಿ ಸಿದ್ದಪಡಿಸಲು ಎಸ್‌ಐಟಿ ಅಧಿಕಾರಿಗಳ ತಯಾರಿ ಮಾಡಿಕೊಂಡಿದ್ದಾರೆ.
ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ (ಇಂದು) ನಿರಾಕರಿಸಿದೆ. ಇದನ್ನೂ ಓದಿ: Ram Temple Theft| ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ; ಡಿಲೀಟ್ ಆಯ್ತು ಮೊಬೈಲ್ ಡೇಟಾ
