ಹೈದರಾಬಾದ್: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ (Pran Pratishtha) ಸಕಲ ಸಿದ್ಧತೆಗಳು ನಡೆದಿವೆ. ಈ ಹೊತ್ತಿನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO), ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರವನ್ನು ಬಿಡುಗಡೆ ಮಾಡಿದೆ.
ಆಕಾಶದಿಂದ ಅಯೋಧ್ಯೆಯ ರಾಮಮಂದಿರ ಹೇಗೆ ಕಾಣುತ್ತದೆ ಎಂಬ ಚಿತ್ರವನ್ನು ಹೈದರಾಬಾದ್‍ನ ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಬಿಡುಗಡೆ ಮಾಡಿದೆ. ಈ ಚಿತ್ರಗಳನ್ನು ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹದಿಂದ ತೆಗೆಯಲಾಗಿದೆ. ಇದರಲ್ಲಿ ದಶರಥ ಮಹಲ್, ಅಯೋಧ್ಯೆಯ ರೈಲು ನಿಲ್ದಾಣ ಮತ್ತು ಪವಿತ್ರ ಸರಯೂ ನದಿ ಕಾಣಿಸುತ್ತದೆ. ಇದನ್ನೂ ಓದಿ: PublicTV Explainer: ‘ದಶಾವತಾರಿ ರಾಮ’ನೂರಿನ ಅಯೋಧ್ಯೆ ರಾಮಮಂದಿರದ 10 ವಿಶೇಷತೆಗಳು.
Advertisement
Advertisement
ಇಂಡಿಯನ್ ರಿಮೋಟ್ ಸೆನ್ಸಿಂಗ್ ಸಿರೀಸ್ ಉಪಗ್ರಹದ ಮೂಲಕ ತೆಗೆದ ಈ ಚಿತ್ರಗಳಲ್ಲಿ 2.7 ಎಕರೆ ಇರುವ ಪವಿತ್ರ ರಾಮಮಂದಿರ ಸಂಕೀರ್ಣವು ನಮಗೆ ಕಾಣುತ್ತದೆ.
Advertisement
Advertisement
ಸೋಮವಾರ (ಜ.22) ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈ ಸಮಾರಂಭದಿಂದ ದೇಶದೆಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಜನ ತಮ್ಮ ಸುತ್ತಮುತ್ತಲಿನ ದೇವಾಲಯಗಳು ಸೇರಿದಂತೆ, ಮನೆಯಲ್ಲೂ ಈ ಸಮಾರಂಭವನ್ನು ದೀಪಾವಳಿಯಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ-ವಿದೇಶಗಳ ಗಣ್ಯರು ಬಾಲರಾಮನ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲಿದ್ದು, ಅಯೋಧ್ಯೆಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠಾಪನೆ; ವಿವಿಧ ರಾಜ್ಯಗಳ 50 ವಾದ್ಯಗಳಿಂದ ಹೊಮ್ಮಲಿದೆ ಮಂಗಳ ನಾದ