Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ- ಪ್ರಧಾನಿಗೆ ಸಿದ್ದರಾಮಯ್ಯ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ- ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Bengaluru City

ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ- ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Public TV
Last updated: January 22, 2024 5:38 pm
Public TV
Share
3 Min Read
NARENDRA MODI SIDDARAMAIAH
SHARE

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸವಾಲು ಹಾಕಿದ್ದಾರೆ.

ಈ ಸಂಬಂಧ ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರೇ (narendra Modi) ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ ಎಂದು ಸವಾಲು ಹಾಕಿದ್ದಾರೆ.

AYODHYA 5

ಎಕ್ಸ್‌ನಲ್ಲೇನಿದೆ..?: ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್‌) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ ಎಂದರು. ಇದನ್ನೂ ಓದಿ: 11 ದಿನಗಳ ಕಠಿಣ ವ್ರತ ಮುಗಿಸಿದ ನಮೋ

AYODHYA RAM MANDIR

ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಡಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಹೇಳಿದರು.

Rama 01

ಪ್ರಧಾನಿ ನರೇಂದ್ರ ಮೋದಿಯವರೇ ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್‌, ಸರ್ಚಾರ್ಜ್‌ಗಳನ್ನು ಹೆಚ್ಚಿಸಿದ್ದೀರಿ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರೇ, ದೇಶದ ಭದ್ರತೆಯ ಬಗ್ಗೆ ನಿಮ್ಮ ಪ್ರಣಾಳಿಕೆಯಲ್ಲಿ ಪುಂಖಾನುಪುಂಖ ಆಶ್ವಾಸನೆಗಳನ್ನು ಕೊಟ್ಟಿದ್ದಿರಿ. ಆದರೆ ಗಡಿಯೊಳಗೆ ಅತಿಕ್ರಮಣ ಮಾಡಿ ಅಕ್ರಮ ಸೇನಾ ನಿರ್ಮಾಣ ಚಟುವಟಿಕೆ ಕೈಗೊಂಡಿರುವ ಚೀನಾವನ್ನು ಹಿಂದಕ್ಕೆ ಕಳುಹಿಸಲಾಗದೆ ಚೀನಾ ನಮ್ಮ ಗಡಿಯನ್ನು ಪ್ರವೇಶಿಸಿಯೇ ಇಲ್ಲ ಎನ್ನುವ ಹೇಳಿಕೆ ನೀಡಿಬಿಟ್ಟಿರಿ! ಆ ಮೂಲಕ ಮುಂದಕ್ಕೆ ಇದ್ದ ಗಡಿ ರೇಖೆಯನ್ನು ಹಿಂದಕ್ಕೆ ಎಳೆದ ಶೂರ ನೀವು! ಯಾವ ಗಡಿ ರೇಖೆಯನ್ನು ಕಾಯುವುದಕ್ಕಾಗಿ ನಮ್ಮ ಪರಾಕ್ರಮಿ ಸೈನಿಕರು ಸಂಘರ್ಷ ನಡೆಸಿ ತಮ್ಮ ಪ್ರಾಣವನ್ನೇ ಸಮರ್ಪಿಸಿದರೋ ಆ ಸೈನಿಕರಿಗೆ ನೀವು ಮರಣೋತ್ತರ ಅವಮಾನ ಮಾಡಿದಿರಿ. ಹೀಗೆ, ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

TAGGED:Ayodhyabengalurunarendra modiRam Mandirsiddaramaiahಅಯೋಧ್ಯೆನರೇಂದ್ರ ಮೋದಿಬೆಂಗಳೂರುರಾಮಮಂದಿರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
18 seconds ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
6 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
16 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
24 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
27 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?