ಬೆಂಗಳೂರು: ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠಾಪನೆಯ (Pran Pratishtha) ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲು ಅಯೋಧ್ಯೆಗೆ ಕರ್ನಾಟಕದ ಸಪ್ತರ್ಷಿಗಳು ಪ್ರಯಾಣ ಬೆಳೆಸಿದ್ದಾರೆ.
ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭ ಜರುಗಲಿದೆ. ಅದರಲ್ಲಿ ಪಾಲ್ಗೊಳ್ಳಲು ಸಪ್ತರ್ಷಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ (Bengaluru Airport) ಅಯೋಧ್ಯೆಗೆ (Ayodhya) ಹೊರಟಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತರಿಗೆ ಆಹ್ವಾನ
Advertisement
Advertisement
ವಾಲ್ಮೀಕಿ ಗುರುಪೀಠದ ಶ್ರೀ, ಶ್ವಾಸಗುರು ವಚನಾನಂದ ಶ್ರೀ, ಬೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಕಾಗಿನೆಲೆಯ ನಿರಂಜನಾನಂದಪುರಿ ಶ್ರೀ, ಕುಂಚಟಿಗ ಗುರುಪೀಠದ ಶಾಂತವೀರಶ್ರೀ, ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ, ಭಗೀರಥ ಗುರುಪೀಠದ ಶ್ರೀಗಳು ಅಯೋಧ್ಯೆಗೆ ತೆರಳಿದ್ದಾರೆ.
Advertisement
ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಇನ್ನೆರಡು ದಿನ ಬಾಕಿ ಇದೆ. ಅಯೋಧ್ಯೆಯಲ್ಲಿ ಸಮಾರಂಭಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ದೇಶ-ವಿದೇಶದ ಗಣ್ಯರು, ಸೆಲೆಬ್ರಿಟಿಗಳಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಮಲ ಪೀಠದ ಮೇಲೆ 36 ಅಡಿ ಅಭಯರಾಮನ ಪ್ರತಿಷ್ಠಾಪನೆ
Advertisement
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮಲಲ್ಲಾ ವಿಗ್ರಹಕ್ಕೆ ರಾಮಮಂದಿರದ ಗರ್ಭಗುಡಿಯಲ್ಲಿ ಸೋಮವಾರ (ಜ.22) ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು.