Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ram Mandir: ಏನಿದು ಪ್ರಾಣ ಪ್ರತಿಷ್ಠೆ? ಆಚರಣೆ ಹೇಗಿರುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | Ram Mandir: ಏನಿದು ಪ್ರಾಣ ಪ್ರತಿಷ್ಠೆ? ಆಚರಣೆ ಹೇಗಿರುತ್ತೆ?

Ayodhya Ram Mandir

Ram Mandir: ಏನಿದು ಪ್ರಾಣ ಪ್ರತಿಷ್ಠೆ? ಆಚರಣೆ ಹೇಗಿರುತ್ತೆ?

Public TV
Last updated: January 5, 2024 7:36 pm
Public TV
Share
2 Min Read
ayodhya ram mandir
SHARE

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾಲ ಸನ್ನಿಹಿತವಾಗಿದೆ. ದೇಶದೆಲ್ಲೆಡೆ ಶ್ರೀರಾಮನ ಸ್ಮರಣೆ, ಭಜನೆ ಕೇಳಿಬರುತ್ತಿದೆ. ಹಿಂದೂಗಳ ಮನೆ ಮನದಲ್ಲಿ ಸಂಭ್ರಮ ತುಂಬಿದೆ. ಇದೇ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ (ಬಾಲರಾಮ) ಪ್ರಾಣ ಪ್ರತಿಷ್ಠೆ ಕೂಡ ಜರುಗಲಿದೆ. ಈ ದಿನಕ್ಕಾಗಿ ಕೋಟ್ಯಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಜ.22 ರ ಪ್ರಮುಖ ಧಾರ್ಮಿಕ ಆಚರಣೆ ಪ್ರಾಣ ಪ್ರತಿಷ್ಠೆ (Pran Pratistha). ಎಷ್ಟೋ ಜನಕ್ಕೆ ಪ್ರಾಣ ಪ್ರತಿಷ್ಠೆ ಬಗ್ಗೆ ಗೊತ್ತಿರುವುದಿಲ್ಲ. ಪ್ರಾಣ ಪ್ರತಿಷ್ಠೆ ಎಂದರೇನು? ಇದರಲ್ಲಿನ ಆಚರಣೆಗಳು ಹೇಗಿರುತ್ತವೆ? ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಇದನ್ನೂ ಓದಿ: Ram Mandir Inauguration: ತಿರುಪತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ

ram temple ayodhya

ಏನಿದು ಪ್ರಾಣ ಪ್ರತಿಷ್ಠೆ?
ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’ ಮತ್ತು ಪ್ರತಿಷ್ಠೆ ಎಂದರೆ ‘ಸ್ಥಾಪನೆ’. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪೂಜಾ ವಿಧಾನ, ವೈದಿಕ ಸ್ತೋತ್ರಗಳ ಪಠಣ ನಡೆಸಲಾಗುವುದು. ಪ್ರಾಣ ಪ್ರತಿಷ್ಠೆ ಎಂದರೆ, ವಿಗ್ರಹಕ್ಕೆ ಜೀವಶಕ್ತಿ ತುಂಬಿ ದೈವಿಕವಾಗಿಸುವ ಆಚರಣೆ ಎನ್ನುತ್ತಾರೆ ಹಿರಿಯರು.

ಪ್ರಾಣ ಪ್ರತಿಷ್ಠೆ ಪ್ರಕ್ರಿಯೆಗೂ ಮೊದಲು ವಿಗ್ರಹದಲ್ಲಿ ದೈವಿಕ ಶಕ್ತಿ ಇರುವುದಿಲ್ಲ. ಪ್ರಾಣ ಪ್ರತಿಷ್ಠೆ ನಂತರವೇ ವಿಗ್ರಹಕ್ಕೆ ವಿಶೇಷ ಶಕ್ತಿ ಬರುತ್ತದೆ. ಬಳಿಕ ವಿಗ್ರಹವು ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಆಗ ದೇವಾಲಯಗಳಲ್ಲಿ ಭಕ್ತರು ವಿಗ್ರಹವನ್ನು ಪೂಜಿಸಬಹುದು ಎಂಬ ನಂಬಿಕೆಯಿದೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

Ayodhya Ram Mandir 3

ಆಚರಣೆ ಹೇಗಿರುತ್ತೆ?
ವಿಗ್ರಹವನ್ನು ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ತರುವುದರೊಂದಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಅಂದರೆ ವಿಗ್ರಹವನ್ನು ಹೊರಗಿನಿಂದ ಕೇಂದ್ರ ಸ್ಥಳಕ್ಕೆ ಸ್ಥಳಾಂತರಿಸುವುದು. ಅತಿಥಿಯನ್ನು ಸ್ವಾಗತಿಸುವಂತೆಯೇ ದೇವಾಲಯಕ್ಕೆ ದೇವರ ವಿಗ್ರಹವನ್ನು ತರಲಾಗುವುದು. ನಂತರ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ. ನಂತರ ಸುಗಂಧ ದ್ರವ್ಯಗಳನ್ನು ಹಚ್ಚಲಾಗುತ್ತದೆ. ನಂತರ ವಿಗ್ರಹದ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಸರಿಯಾದ ಸ್ಥಳದಲ್ಲಿ ಪೂರ್ವಾಭಿಮುಖವಾಗಿ ಸ್ಥಾಪಿಸುತ್ತಾರೆ.

ಪುರೋಹಿತರು ಮಂತ್ರಗಳನ್ನು ಪಠಿಸುತ್ತಾರೆ. ಮಂತ್ರಗಳ ಪಠಣೆ, ಆಚರಣೆಯಿಂದ ವಿಗ್ರಹಕ್ಕೆ ದೈವಶಕ್ತಿ ಬರುತ್ತದೆ. ನಂತರ ವಿಗ್ರಹಕ್ಕೆ ಅಭಿಮುಖವಾಗಿ ಕನ್ನಡಿಯನ್ನು ಹಿಡಿಯಲಾಗುತ್ತದೆ. ಬಳಿಕ ವಿಗ್ರಹದ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ಬಿಚ್ಚಿಲಾಗುತ್ತದೆ. ಆಗ ಕನ್ನಡಿ ಒಡೆಯುತ್ತದೆ. ಕನ್ನಡಿ ಒಡೆಯುವುದು, ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಂಡಿದೆ ಎಂಬುದಕ್ಕೆ ಸಾಕ್ಷಿ. ಈ ಪ್ರಕ್ರಿಯೆ ಮುಗಿದ ನಂತರ ವಿಗ್ರಹವನ್ನು ಪೂಜಿಸಲು ಯೋಗ್ಯವೆಂದು ಪರಿಗಣಿಸಲಾಗುತ್ತದೆ. ವಿಗ್ರಹಕ್ಕೆ ಜೀವತುಂಬಿ ದೈವಿಕವಾಗಿಸುವ ಆಚರಣೆ ಇದು ಎಂದು ನಂಬಲಾಗಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

ಪೂರ್ವಾಭಿಮುಖವಾಗಿ ವಿಗ್ರಹ ಸ್ಥಾಪಿಸೋದ್ಯಾಕೆ?
ಪೂರ್ವಾಭಿಮುಖ ಎಂದರೆ ಸೂರ್ಯೋದಯದ ಸ್ಥಾನ. ಸೂರ್ಯನ ಉದಯದಿಂದ ಬೆಳಕು ಹೊಮ್ಮುತ್ತದೆ. ಜೀವಗಳಿಗೆ ಚೈತನ್ಯ ಬರುತ್ತದೆ. ಆ ದೃಷ್ಟಿಯಿಂದಲೇ ದೇವಾಲಯಗಳಲ್ಲಿ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಲಾಗುತ್ತದೆ. ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯ ಪೂರ್ವ ದಿಕ್ಕಿನಲ್ಲಿ ಉದಯಿಸುವುದರಿಂದ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಬೇಕು. ದೇವರ ವಿಗ್ರಹಕ್ಕೆ ಮೊದಲ ಪೂಜೆ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಬೇಕು ಎನ್ನಲಾಗುತ್ತದೆ.

TAGGED:Ram Mandirಅಯೋಧ್ಯೆಪ್ರಾಣ ಪ್ರತಿಷ್ಠೆರಾಮಮಂದಿರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
52 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?